ಮಡಿಕೇರಿ, ಡಿ. ೧೩: ಕೊಡಗು ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನಿನ್ನೆ ೨೯ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಮತ್ತೇ ೯ ವಿದ್ಯಾರ್ಥಿಗಳು ಸೋಂಕಿಗೆ ತುತ್ತಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್, ಈ ಹಿಂದೆ ಪರೀಕ್ಷೆ ಒಳಪಟ್ಟಿದ್ದ ವಿದ್ಯಾರ್ಥಿಗಳ ಪೈಕಿ ಭಾನುವಾರ ೨೯ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಸೋಮವಾರ ಬೆಳಿಗ್ಗೆ ಆಲೂರು ಸಿದ್ದಾಪುರದ ಮೊರಾರ್ಜಿ ವಸತಿ ಶಾಲೆಯ ೯ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಸಮಸ್ಯೆ ಇಲ್ಲ. ಎಲ್ಲರನ್ನೂ ಪ್ರತ್ಯೇಕಿಸಿ ಇಡಲಾಗಿದೆ ಎಂದು ತಿಳಿಸಿದ್ದಾರೆ.