ಮಡಿಕೇರಿ, ಡಿ.೧೩: ಪ್ರತಿ ವರ್ಷದಂತೆ ಈ ಬಾರಿಯು ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹತ್ತನೇ ತರಗತಿಯಲ್ಲಿ ಗ್ರಾಮೀಣ ವಿಭಾಗ ಶೇ.೮೫ ಮೇಲ್ಪಟ್ಟು ಹಾಗೂ ನಗರ ವಿಭಾಗ ಶೇ.೯೦ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿ ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಡಿ.೧೫ ರೊಳಗೆ ಅಂಕಪಟ್ಟಿಯ ಪ್ರತಿಯೊಂದಿಗೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸುವಂತೆ ತಿಳಿಸಿದ್ದಾರೆ.

ಸಿ.ಇ.ಟಿ ಮತ್ತು ಎನ್.ಇ.ಇ.ಟಿ ಯಲ್ಲಿ ೧೦೦೦ ರ‍್ಯಾಂಕ್ ಒಳಗೆ ಪಡೆದುಕೊಂಡಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೂಡ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ವೈದ್ಯಕೀಯ, ಇಂಜಿನಿಯರಿAಗ್, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕöÈತಿಕ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟç ಹಾಗೂ ಅಂತರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಆಸಕ್ತರು ಸೂಕ್ತ ದಾಖಲೆಯೊಂದಿಗೆ ಜನವರಿ ೧೫ ರೊಳಗೆ ಸಂಘದ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಲ್ಲದೇ ಅರೆಭಾಷೆ ದಿನಾಚರಣೆ ಅಂಗವಾಗಿ ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಗೌಡ ಜನಾಂಗದ ಸಾರ್ವಜನಿಕರಿಗೆ ಅರೆಭಾಷೆ ಕಥಾಸ್ಪರ್ಧೆ ಹಾಗೂ ವಿದ್ಯಾರ್ಥಿಗಳಿಗೆ ಅರೆಭಾಷೆ ಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಥೆಗಳು ಮತ್ತು ಕವನಗಳನ್ನು ತಾ.೩೧ ರೊಳಗಾಗಿ ಸಂಘದ ಕಚೇರಿಗೆ ತಲುಪಿಸುವಂತೆ ರಮೇಶ್ ಜೋಯಪ್ಪ ಮನವಿ ಮಾಡಿದ್ದಾರೆ.