ಮಡಿಕೇರಿ, ಡಿ. ೧೩: ಡಿಸೆಂಬರ್ ಅಂತ್ಯದೊಳಗೆ ಮಡಿಕೇರಿ ಹೊರ ವಲಯದಲ್ಲಿ ನಿರ್ಮಾಣವಾಗುತ್ತಿರುವ ಕೊಡವ ಹೆರಿಟೇಜ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಶಾಸ್ತç ಸಚಿವ ಆನಂದ್ ಸಿಂಗ್ ಭರವಸೆ ನೀಡಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ

ಪರಿಷತ್ ಸದಸ್ಯೆ

ಶಾಂತೆಯAಡ ವೀಣಾ ಅಚ್ಚಯ್ಯ, ಕಾಮಗಾರಿ ಯಾವ ಹಂತದಲ್ಲಿದೆ?, ಅನುದಾನದ ಬಿಡುಗಡೆ ಬಗ್ಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ಹೆರಿಟೇಜ್ ಕಟ್ಟಡದ ಕಾಮಗಾರಿಯಲ್ಲಿ ಪ್ರಸ್ತುತ ಐನ್‌ಮನೆಗಳ ಮೇಲ್ಚಾವಣಿ ಕೆಲಸ ಪೂರ್ಣಗೊಂಡಿದ್ದು, ನೆಲಹಾಸು,

(ಮೊದಲ ಪುಟದಿಂದ) ವಿದ್ಯುದ್ದೀಕರಣ ಹಾಗೂ ಇತರೆ ಕೆಲಸಗಳು ಪ್ರಗತಿಯಲ್ಲಿವೆ. ಇದುವರೆಗೂ ರೂ. ೨.೫೩ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇನ್ನೂ ರೂ. ೭೬.೯೧ ಲಕ್ಷ ಬಿಡುಗಡೆಯಾಗಬೇಕಾಗಿದೆ. ಲೋಕೋಪಯೋಗಿ ಇಲಾಖೆ ಸಲ್ಲಿಸಿರುವ ವರದಿಯಂತೆ ಐದನೇ ಕಂತಾಗಿ ತಾ. ೮ ರಂದು ರೂ. ೨೯ ಲಕ್ಷ ಬಿಡುಗಡೆ ಮಾಡಲು ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಕ್ಷಿತಾರಣ್ಯದಲ್ಲಿ ತ್ಯಾಜ್ಯ

ಕೊಡಗು-ಕೇರಳ ಗಡಿಯಾದ ಮಾಕುಟ್ಟ ವ್ಯಾಪ್ತಿಯ ರಕ್ಷಿತಾರಣ್ಯ ಪ್ರದೇಶದಲ್ಲಿ ಕೇರಳ ರಾಜ್ಯದ ಕಸವನ್ನು ತಂದು ಸುರಿಯಲಾಗುತ್ತಿದೆ ಎಂದು ‘ಶಕ್ತಿ’ಯಲ್ಲಿ ಪ್ರಕಟ ವರದಿ ಹಿನ್ನೆಲೆ ವೀಣಾ ಅಚ್ಚಯ್ಯ ಮೇಲ್ಮನೆಯಲ್ಲಿ ಪ್ರಸ್ತಾಪಿಸಿ ಈ ಬಗ್ಗೆ ಸರಕಾರ ಕೈಗೊಂಡ ಕ್ರಮದ ಬಗ್ಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ, ಈ ಬಗ್ಗೆ ಸರಕಾರದ ಗಮನಕ್ಕೆ ಬಂದಿದೆ. ಮಾಕುಟ್ಟ ಅರಣ್ಯ ತನಿಖಾ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಟ್ಟುನಿಟ್ಟಾಗಿ ತ್ಯಾಜ್ಯ ವಸ್ತುಗಳನ್ನು ತುಂಬಿಕೊAಡು ಬರುವಂತಹ ವಾಹನಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ಕಂಡುಬAದಲ್ಲಿ ಅದನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಗಸ್ತು ತಿರುಗುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.