ಮಡಿಕೇರಿ, ಡಿ. ೧೨: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ವಿಶೇಷ ಮಕ್ಕಳ ಪೊಲೀಸ್ ಘಟಕ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಮುಖರು ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಹಾಗೂ ಕಾವಾಡಿ ಗ್ರಾಮಗಳಿಗೆ ತೆರಳಿ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ ಬಗ್ಗೆ ಅರಿವು ಮೂಡಿಸಿದರು.

ಅಲ್ಲಿಯ ಕಾಫಿ ತೋಟಗಳ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ತಪಾಸಣೆ ಕೈಗೊಂಡು ಅಲ್ಲಿಯ ತೋಟದ ಮಾಲೀಕರಿಗೆ ಹಾಗೂ ಮಕ್ಕಳ ಪೋಷಕರಿಗೆ ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು. ಶಿಕ್ಷಣವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ಶಾಲೆಗಳಿಗೆ ದಾಖಲಿಸುವುದು ಪೋಷಕರ ಜವಾಬ್ದಾರಿ. ಕಡ್ಡಾಯವಾಗಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವಂತೆ ಬಾಲ ಕಾರ್ಮಿಕ ಕಾಯ್ದೆ ಬಗ್ಗೆ ಅರಿವು ಮೂಡಿಸಲಾಯಿತು.