ಮಡಿಕೇರಿ, ಡಿ. ೧೨: ಜಿಲ್ಲೆಯ ೨ ಶಾಲೆಗಳ ೨೯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಶನಿವಾರ ನಗರದ ಕೊಡಗು ವಿದ್ಯಾಲಯದ ೨೧೦ ವಿದ್ಯಾರ್ಥಿಗಳನ್ನು ಹಾಗೂ ಆಲೂರು-ಸಿದ್ದಾಪುರದ ಮೊರಾರ್ಜಿ ವಸತಿ ಶಾಲೆಯ ೭೫ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊಡಗು ವಿದ್ಯಾಲಯದ ೯, ವಸತಿ ಶಾಲೆಯ ೨೦ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್ 'ಶಕ್ತಿ'ಗೆ ತಿಳಿಸಿದ್ದಾರೆ.
ಸೋಂಕಿತ ವಿದ್ಯಾರ್ಥಿಗಳು ಲಕ್ಷಣ ರಹಿತರಾಗಿದ್ದು, ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಕಂಡುಬAದಿಲ್ಲ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೆ ಇನ್ನೂ ಕೆಲವು ವಿದ್ಯಾರ್ಥಿಗಳ ವರದಿ ಬರಲು ಬಾಕಿ ಇದೆ ಎಂದು ತಿಳಿಸಿದ್ದಾರೆ.