ಮಡಿಕೇರಿ, ಡಿ. ೧೪: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಐಗೂರು ಅರೆಭಾಷೆ ಗೌಡ ಸಮಾಜದ ವತಿಯಿಂದ ತಾ. ೧೫ ರಂದು (ಇಂದು) ಅರೆಭಾಷೆ ದಿನಾಚರಣೆ ಏರ್ಪಡಿಸಲಾಗಿದೆ.

ಐಗೂರು ಅರೆಭಾಷೆ ಗೌಡ ಸಮಾಜದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಕಡ್ಲೇರ ಹೊನ್ನಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜದ ಗೌರವ ಅಧ್ಯಕ್ಷ ಪೊನ್ನಚನ ಗಣಪತಿ ಆಗಮಿಸುವರು. ಮುಖ್ಯ ಭಾಷಣಕಾರರಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಕುಡೆಕಲ್ ಸಂತೋಷ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.