ನಾಪೋಕ್ಲು, ಡಿ. ೧೪: ನಾಪೋಕ್ಲು ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಕ್ಲಬ್ ಸದಸ್ಯರಿಗೆ ಪ್ರಾಂತೀಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟವು ತಾ. ೧೬ರಂದು ನಾಪೋಕ್ಲು ಕೊಡವ ಸಮಾಜದ ಸ್ಪೋರ್ಟ್ಸ್ ಮತ್ತು ರಿಕ್ರಿಯೇಶನ್ ಕ್ಲಬ್‌ನ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರೀಡಾಕೂಟದಲ್ಲಿ ಪುರುಷರ ಡಬಲ್ಸ್, ಮಹಿಳೆಯರ ಡಬಲ್ಸ್ ಹಾಗೂ ಮಿಶ್ರ ಡಬಲ್ಸ್ ಪಂದ್ಯಾಟ ನಡೆಯಲಿದೆ ಎಂದು ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಮುಕ್ಕಾಟಿರ ವಿನಯ್ ತಿಳಿಸಿದ್ದಾರೆ.