ಮಡಿಕೇರಿ, ಡಿ. ೧೪: ಜಿಲ್ಲೆಯಲ್ಲಿ ಮಂಗಳವಾರ ೧೦ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೯ ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು ೧ ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೮, ವೀರಾಜಪೇಟೆ ತಾಲೂಕಿನಲ್ಲಿ ೧, ಸೋಮವಾರಪೇಟೆ ತಾಲೂಕಿನಲ್ಲಿ ೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫,೬೯೫ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೪ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೫,೦೩೬ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೩೪ ಮರಣ ಪ್ರಕರಣಗಳು ವರದಿಯಾಗಿವೆ. ೨೨೫ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೩೦ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೦.೪೧ ಆಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.