ಕುಶಾಲನಗರ, ಡಿ. ೧೫ : ಇಲ್ಲಿನ ರಥಬೀದಿಯಲ್ಲಿರುವ ಆಂಜನೇಯ ಸೇವಾ ಸಮಿತಿ ವತಿಯಿಂದ ೩೬ ನೇ ವರ್ಷದ ಹನುಮ ಜಯಂತಿ ಕಾರ್ಯಕ್ರಮ ತಾ.೧೬ ರಂದು (ಇಂದು) ನಡೆಯಲಿದೆ. ಬೆಳಿಗ್ಗೆ ೭ ಗಂಟೆಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ ನಂತರ ೧ ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ. ನಂತರ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಲಿದ್ದು, ಭಕ್ತರು ಕೋವಿಡ್ ನಿಯಮಾವಳಿ ಪಾಲಿಸುವುದರೊಂದಿಗೆ ಭಾಗವಹಿಸಲು ದೇವಾಲಯ ಸೇವಾ ಸಮಿತಿ ಕೋರಿದೆ.
ಮದ್ಯ ಮಾರಾಟ ನಿಷೇಧ: ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರಲ್ಲಿ ದತ್ತವಾಗಿರುವ ಅಧಿಕಾರ ಚಲಾಯಿಸಿ ತಾ. ೧೬ರ ಬೆಳಿಗ್ಗೆ ೬ ಗಂಟೆಯಿAದ ತಾ. ೧೭ರ ಬೆಳಿಗ್ಗೆ ೬ ಗಂಟೆಯವರೆಗೆ ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಅಂಗಡಿ, ಬಾರ್, ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಆದೇಶ ಹೊರಡಿಸಿದ್ದಾರೆ.