ಗೋಣಿಕೊಪ್ಪ ವರದಿ, ಡಿ. ೧೫: ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸಂಬAಧಿಸಿದAತೆ ತಾ. ೧೬ ರಂದು (ಇಂದು) ಆನ್‌ಲೈನ್ ಮೂಲಕ ವಿಚಾರ ಸಂಕಿರಣ ನಡೆಯಲಿದೆ ಎಂದು ಬಿಜೆಪಿ ಕೃಷಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ ತಿಳಿಸಿದ್ದಾರೆ.
ಗುಜರಾತ್‌ನ ಆನಂದ್ ಜಿಲ್ಲೆಯಿಂದ ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆವರೆಗೆ ಮಹತ್ವದ ವಿಚಾರ ಸಂಕಿರಣದ ನೇರ ಪ್ರಸಾರ ಆನ್‌ಲೈನ್ ಮೂಲಕ ನಡೆಯಲಿದೆ. ನುರಿತ ಕೃಷಿ ತಜ್ಞರು, ವಿಜ್ಞಾನಿಗಳು, ಕೃಷಿ ಉಪನ್ಯಾಸಕರು ಮಾಹಿತಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಮಾರ್ಗದರ್ಶನ ನೀಡಲಿದ್ದಾರೆ. ಬಿಜೆಪಿ ಕೃಷಿ ಮೋರ್ಚಾ ನೇರಪ್ರಸಾರ ವೀಕ್ಷಿಸಲು ಅವಕಾಶ ಮಾಡಿದ್ದು, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿಕೊಂಡಿದ್ದಾರೆ.