ಮಡಿಕೇರಿ, ಡಿ. ೧೫: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಮಾರ್ಚ್-೨೦೨೨ರ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಪ್ರೆಂಟಿಷಿಪ್ ತರಬೇತಿಯನ್ನು ಫಿಟ್ಟರ್, ಟರ್ನರ್, ಮೆಶಿನಿಸ್ಟ್, ಎಲೆಕ್ಷಿçಷಿಯನ್, ವೆಲ್ಡರ್, ಕೋಪಾ (ಸಿಒಪಿಎ) ಫೌಂಡ್ರಿಮ್ಯಾನ್ ಹಾಗೂ ಶೀಟ್ ಮೆಟಲ್ ವರ್ಕರ್ ವೃತ್ತಿಗಳಲ್ಲಿ ತರಬೇತಿ ನೀಡಲಾಗುತ್ತದೆ.

ಆದ್ದರಿಂದ ಐ.ಟಿ.ಐ ನಲ್ಲಿ ತೇರ್ಗಡೆ ಹೊಂದಿರುವAತಹ ಅಭ್ಯರ್ಥಿಗಳು ಚಿಠಿಠಿಡಿeಟಿಣiಛಿshiಠಿiಟಿಜiಚಿ.oಡಿg / ಛಿಚಿಟಿಜiಜಚಿಣe – ಡಿegisಣಡಿಚಿಣioಟಿ. ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿ, ನೋಂದಣಿ ಸಂಖ್ಯೆಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ನಮೂದಿಸಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ತಾ. ೩೧ ರೊಳಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ದೂ. ೦೮೨೭೨-೨೨೫೮೫೧ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕೆ

ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಮತ್ತು ಅಲೆಮಾರಿ/ ಅರೆ ಅಲೆಮಾರಿ ಜನಾಂಗಗಳಿಗೆ ಸೇರಿದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ಒಂದನೇ ತರಗತಿಯಿಂದ ೧೦ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು; ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿ ವೇತನ ವಾರ್ಷಿಕ ಆದಾಯ ಮಿತಿ ರೂ. ೨.೫೦ ಲಕ್ಷ , ಪ್ರವರ್ಗ -೧ರ ವಿದ್ಯಾರ್ಥಿಗಳಿಗೆ ಮಾತ್ರ ರೂ ೧ ಲಕ್ಷ, ಪ್ರವರ್ಗ -೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗಗಳಿಗೆ ರೂ. ೪೪,೫೦೦ ಆಗಿದೆ.

ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್ –ಐಡಿ, ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಪೋಷಕರ ಆಧಾರ್ ಸಂಖ್ಯೆ, ಜಾತಿ ಪ್ರಮಾಣದ ಪತ್ರದ ಆರ್.ಡಿ. ಸಂಖ್ಯೆ, ಆದಾಯ ಪ್ರಮಾಣದ ಪತ್ರದ ಆರ್.ಡಿ.ಸಂಖ್ಯೆ, ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿ ನಿಲಯ ಪ್ರವೇಶ ಸಂಖ್ಯೆ, ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಐಎಫ್‌ಎಸ್‌ಸಿ ಸಂಖ್ಯೆ ಬ್ಯಾಂಕಿನ ವಿಳಾಸ, ಪೋಷಕರ ಆಧಾರ್ ನಂಬರ್‌ಗೆ ಲಿಂಕ್ ಮಾಡಿರುವ ಮೊಬೈಲ್ ಸಂಖ್ಯೆ ಹಾಗೂ ಭೌತಿಕ ಅನುಮತಿ ಪತ್ರ ಸಲ್ಲಿಸಬೇಕು.

ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ಇಲಾಖಾ ವೆಬ್‌ಸೈಟ್ ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿ/೮೦೮೦/೨೧೨೨ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮತ್ತು ತಾಲೂಕು ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಜಿಲ್ಲಾ ಕಚೇರಿ ಮಡಿಕೇರಿ ಮೊ.ಸಂ. ೯೪೪೮೨೦೫೯೧೯, ಮಡಿಕೇರಿ ತಾಲೂಕು ಕಚೇರಿ ಮೊ.ಸಂ.೯೪೮೦೩೫೬೪೦೯ ವೀರಾಜಪೇಟೆ ತಾಲೂಕು ಕಚೇರಿ ಮೊ.ಸಂ.೮೭೬೨೪೭೬೭೯೦, ಸೋಮವಾರಪೇಟೆ ತಾಲೂಕು ಕಚೇರಿ ಮೊ.ಸಂ. ೮೬೬೦೦೧೯೦೪೨ ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ವಿದ್ಯಾಸಿರಿ ಯೋಜನೆಗೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೧-೨೨ ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿ ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ ೩೧ ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಭೇಟಿ ನೀಡಬೇಕಾದ ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು. ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ:೮೦೫೦೭೭೦೦೦೫/ ೮೦೫೦೭೭೦೦೦೪, ಇ-ಮೇಲ್:bಛಿತಿಜ.sಛಿhoಟಚಿಡಿshiಠಿ@ಞಚಿಡಿಟಿಚಿಣಚಿಞಚಿ.gov.iಟಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂ. ೦೮೦-೩೫೨೫೪೭೫೭ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.