ಮಡಿಕೇರಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಡೇಪAಡ ಸುಜಾ ಕುಶಾಲಪ್ಪ ಗೆಲುವು ದಾಖಲಿಸಿದ ಹಿನ್ನೆಲೆ ಕೊಡಗು ಜಿಲ್ಲೆಯ ವಿವಿಧೆಡೆ ಬಿ.ಜೆ.ಪಿ. ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಪಟಾಕಿ ಸಿಡಿಸಿ, ಜಯಘೋಷ ಕೂಗಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು ಸಂಭ್ರಮಿಸಿದರು.ಸಿದ್ದಾಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ.ಯ ಎಂ.ಪಿ. ಸುಜಾ ಕುಶಾಲಪ್ಪ ಅವರು ಗೆಲುವು ಸಾಧಿಸಿದ ಹಿನ್ನೆಲೆ ಸಿದ್ದಾಪುರದಲ್ಲಿ ಬಿ.ಜೆ.ಪಿ. ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ದೇವಾಲಯದ ಸಮೀಪದಿಂದ ಸಿದ್ದಾಪುರದ ಪಟ್ಟಣದವರೆಗೆ ತೆರೆದ ಜೀಪಿನಲ್ಲಿ ಸುಜಾ ಕುಶಾಲಪ್ಪ ಅವರನ್ನು ಮೆರವಣಿಗೆ ನಡೆಸಲಾಯಿತು. ನಂತರ ನೆಲ್ಲಿಹುದಿಕೇರಿಯವರೆಗೆ ಮೆರವಣಿಗೆ ತೆರಳಿತು.
ಈ ಸಂದರ್ಭ ಬಿ.ಜೆ.ಪಿ. ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವೀರಾಜಪೇಟೆ ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್, ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವಿ.ಕೆ. ಲೋಕೇಶ್, ಪ್ರಮುಖರಾದ ಮಾಚಿಮಂಡ ಸುವಿನ್ ಗಣಪತಿ, ಎಂ. ಮಧು ದೇವಯ್ಯ, ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ತೀತಮಾಡ ರೀನಾ ತುಳಸಿ, ಹೊಸ್ಕೇರಿ ಗ್ರಾ.ಪಂ. ಅಧ್ಯಕ್ಷ ಪ್ರಭುಶೇಖರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಬಿ.ಜೆ.ಪಿ. ಪಕ್ಷದ ಪದಾಧಿಕಾರಿಗಳು ಇನ್ನಿತರರು ಹಾಜರಿದ್ದರು. ರಸ್ತೆಯ ಉದ್ದಗಲಕ್ಕೂ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು. ವಿಜಯೋತ್ಸವ ಮಾಡಿದರು.ಸೋಮವಾರಪೇಟೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರು ಗೆಲುವು ಸಾಧಿಸಿದ ಹಿನ್ನೆಲೆ ಸೋಮವಾರಪೇಟೆ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಅಭ್ಯರ್ಥಿ ಹಾಗೂ ಪಕ್ಷದ ನಾಯಕರ ಪರ ಜಯಕಾರ ಹಾಕಿದರು. ಇದರೊಂದಿಗೆ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ವ್ಯಕ್ತಪಡಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಪ್ರಮುಖರಾದ ಎಂ.ಬಿ. ಅಭಿಮನ್ಯುಕುಮಾರ್ ಅವರುಗಳು ಮಾತನಾಡಿ, ಕೊಡಗು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪರಿಷತ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಬೆಂಬಲ ನೀಡಿದ್ದಾರೆ ಎಂದು ಅಭಿಪ್ರಾಯಿಸಿದರು.
ಈ ಸಂದರ್ಭ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಎಸ್.ಸಿ. ಮೋರ್ಚಾ ಅಧ್ಯಕ್ಷ ರಾಮಕೃಷ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮೋಕ್ಷಿಕ್‌ರಾಜ್, ಜಿ.ಪಂ. ಮಾಜಿ ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಮಾಜಿ ಸದಸ್ಯ ಧರ್ಮಪ್ಪ, ಪ.ಪಂ. ಸದಸ್ಯರಾದ ಬಿ.ಆರ್. ಮಹೇಶ್, ಶುಭಕರ್, ಸಾಮಾಜಿಕ ಜಾಲತಾಣ ಸಂಚಾಲಕ ಪ್ರಿಜೇಶ್, ಕಂಠಿ ಕಾರ್ಯಪ್ಪ, ಹೆಚ್.ಎನ್. ಅಶೋಕ್, ರೇಣುಕಾ ವೆಂಕಟೇಶ್, ಇಂದಿರಾ, ಶ್ರೀಕಾಂತ್ ಸೇರಿದಂತೆ ಪಕ್ಷದ ಕಾರ್ಯಕರ್ತರು, ಮುಖಂಡರು ಭಾಗಿಯಾಗಿದ್ದರು.ಕುಶಾಲನಗರ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರ ಗೆಲುವಿನ ಹಿನ್ನೆಲೆ ಕುಶಾಲನಗರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪಟ್ಟಣ ಬಿಜೆಪಿ ಘಟಕದ ಆಶ್ರಯದಲ್ಲಿ ಕಾರ್ಯಕರ್ತರು ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಸೇರಿ ಸಿಹಿ ಹಂಚುವ ಮೂಲಕ ಪಕ್ಷದ ಪರ ಘೋಷಣೆ ಕೂಗಿ ಸಂಭ್ರಮಿಸಿದರು.
ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್, ಬಿಜೆಪಿ ನಗರಾಧ್ಯಕ್ಷ ಉಮಾಶಂಕರ್, ಪಟ್ಟಣ ಪಂಚಾಯಿತಿ ಸದಸ್ಯರಾದ ತಿಮ್ಮಪ್ಪ, ರೂಪ ಉಮಾಶಂಕರ್, ಪ್ರಮುಖರಾದ ಎಂ.ಎನ್. ಕುಮಾರಪ್ಪ, ಬೋಸ್ ಮೊಣ್ಣಪ್ಪ, ಎಂ.ಡಿ. ಕೃಷ್ಣಪ್ಪ ಮತ್ತಿತರರು ಇದ್ದರು.ಚೆಟ್ಟಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಡೇಪAಡ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ ಹಿನ್ನೆಲೆ ಚೆಟ್ಟಳ್ಳಿಯ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಮಾಜಿ ಜಿಲ್ಲಾ ಪಂಚಾಯಿತಿ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಇನ್ನೂ ಹೆಚ್ಚು ಮತ ಪಡೆದು ಗೆಲುವನ್ನು ಸಾಧಿಸಬೇಕಿತ್ತು. ಆದರೆ ಪಕ್ಷದಲ್ಲಿದ್ದು ಪಕ್ಷಕ್ಕೆ ದ್ರೋಹ ಎಸಗಿರುವವರಿಂದ ಮತಗಳ ಗೆಲುವಿನ ಅಂತರ ಕಡಿಮೆಯಾಗಲು ಕಾರಣ. ಕಾರ್ಯಕರ್ತರ ಬೆಂಬಲದಿAದ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಲು ಕಾರಣವಾಗಿದೆ ಎಂದರು. ಸ್ಥಳೀಯ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಬಲ್ಲಾರಂಡ ಕಂಠಿ ಕಾರ್ಯಪ್ಪ, ತಾಲೂಕು ಬಿಜೆಪಿ ಕಾರ್ಯದರ್ಶಿ ಮೇರಿ ಅಂಬುದಾಸ್ ಮಾತನಾಡಿದರು.
ಜಯಘೋಶವನ್ನು ಕೂಗುವ ಮೂಲಕ ಸಿಹಿಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭ ಸ್ಥಳೀಯ ವಾರ್ಡ್ನ ಅಧ್ಯಕ್ಷರು, ಕಾರ್ಯದರ್ಶಿಗಳು, ಬಿಜೆಪಿಯ ತಾಲೂಕು ಸಮಿತಿ ಸದಸ್ಯರುಗಳು, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ, ಚೆಟ್ಟಳ್ಳಿ ಸಹಕಾರ ಸಂಘದ ನಿರ್ದೇಶಕರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರುಗಳು ಭಾಗವಹಿಸಿದ್ದರು.