ಸೋಮವಾರಪೇಟೆ, ಡಿ. ೧೫: ಕಾಫಿ ಬೆಳೆಗಾರರ ೧೦ ಹೆಚ್.ಪಿ. ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್, ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ, ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಸರ್ಕಾರ ಬೆಳಗಾವಿ ಅಧಿವೇಶನದಲ್ಲೇ ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದಿAದ ನಡೆಯುತ್ತಿರುವ ಚಳುವಳಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಇಲ್ಲಿನ ಜೇಸೀ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿAದ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ೩ನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗಾವಿ ಅಧಿವೇಶನದಲ್ಲಿಯೇ ಕೊಡಗಿನ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸೂಕ್ತ ಪರಿಹಾರ ಕಲ್ಪಿಸಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.
ಅಧಿವೇಶನದಲ್ಲಿ ನಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿ, ಸಮಸ್ಯೆ ಪರಿಹಾರಗೊಳಿಸುವವರೆಗೂ ಧರಣಿ ಮುಂದುವರೆಸುವುದಾಗಿ ರೈತ ಸಂಘದ ಅಧ್ಯಕ್ಷ ದಿನೇಶ್, ಸಂಚಾಲಕ ಗರಗಂದೂರು ಲಕ್ಷö್ಮಣ್, ತಲ್ತರೆ ರಾಜಪ್ಪ ಸೇರಿದಂತೆ ಇತರರು ತಿಳಿಸಿದರು. ಹಿರಿಕರ ಗ್ರಾಮದ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಹರಪಳ್ಳಿ ರವೀಂದ್ರ ಧರಣಿನಿರತ ರೈತರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದರು.