ಮಡಿಕೇರಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಡೇಪAಡ ಸುಜಾ ಕುಶಾಲಪ್ಪ ಗೆಲುವು ದಾಖಲಿಸಿದ ಹಿನ್ನೆಲೆ ಕೊಡಗು ಜಿಲ್ಲೆಯ ವಿವಿಧೆಡೆ ಬಿ.ಜೆ.ಪಿ. ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಪಟಾಕಿ ಸಿಡಿಸಿ, ಜಯಘೋಷ ಕೂಗಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು ಸಂಭ್ರಮಿಸಿದರು.ನಾಪೋಕ್ಲು: ಸ್ಥಳೀಯ ಸಂಸ್ಥೆಗಳಿAದ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ.ಯಿಂದ ಸ್ಪರ್ಧಿಸಿದ್ದ ಮಂಡೇಪAಡ ಸುಜಾ ಕುಶಾಲಪ್ಪ ಅವರು ಜಯಶೀಲರಾದ ಹಿನ್ನೆಲೆ ನಾಪೋಕ್ಲು ಬಿ.ಜೆ.ಪಿ. ವತಿಯಿಂದ ವಿಜಯೋತ್ಸವವನ್ನು ಜಯ ಘೋಷದೊಂದಿಗೆ ಪಟಾಕಿ ಸಿಡಿಸಿ ಆಚರಿಸಲಾಯಿತು.

ಈ ಸಂದರ್ಭ ಬಿ.ಜೆ.ಪಿ. ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅರೆಯಡ ಅಶೋಕ, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಚಾಳಿಯಂಡ ಜಗದೀಶ್, ಬಿ.ಎಂ. ಪ್ರತೀಫ್, ಕನ್ನಂಭಿರ ಸುಧಿ ತಿಮ್ಮಯ್ಯ, ದವಸ ಬಂಡಾರದ ಅಧ್ಯಕ್ಷ ಕಂಗಾAಡ ಜಾಲಿ ಪೂವಪ್ಪ ಸೇರಿದಂತೆ ಇನ್ನಿತರರು ಇದ್ದರು.

ಕೂಡುಮಂಗಳೂರು ಬಿ.ಜೆ.ಪಿ. ಶಕ್ತಿ ಕೇಂದ್ರಕೂಡಿಗೆ: ಕೂಡುಮಂಗಳೂರು ಬಿ.ಜೆ.ಪಿ. ಶಕ್ತಿ ಕೇಂದ್ರದ ವತಿಯಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ ಹಿನ್ನೆಲೆ ಡೈರಿ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಣೆ ನೆರವೇರಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಬಾಸ್ಕರ್ ನಾಯಕ್, ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ, ಕೂಡುಮಂಗಳೂರು ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ, ಪ್ರವೀಣ್, ಪಕ್ಷದ ಪ್ರಮುಖರಾದ ಕೆ.ಕೆ. ಭೋಗಪ್ಪ, ಕೆ. ವರದ, ಮನು ನಂಜುAಡ, ಕಿರಣ್, ಪ್ರಭಾಕರ್, ಎಂ.ಬಿ. ಜಯಂತ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಹಾಲಿ ಸದಸ್ಯರು, ಮಾಜಿ ಸದಸ್ಯರು, ಬಿ.ಜೆ.ಪಿ. ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

ಪೊನ್ನಂಪೇಟೆಯಲ್ಲಿ ಕಾರ್ಯಕರ್ತರ ವಿಜಯೋತ್ಸವ

ಪೊನ್ನಂಪೇಟೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಸುಜಾ ಕುಶಾಲಪ್ಪ ಜಯಶಾಲಿಯಾದ ಹಿನ್ನೆಲೆ ಪೊನ್ನಂಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಪೊನ್ನಂಪೇಟೆ ಬಸವೇಶ್ವರ ದೇವಸ್ಥಾನದ ಮುಂಭಾಗ ನೂರಾರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಡಿಜೆ ಶಬ್ದಕ್ಕೆ ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರು. ಪೊನ್ನಂಪೇಟೆಗೆ ಆಗಮಿಸಿದ ಸುಜಾ ಕುಶಾಲಪ್ಪ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಅವರನ್ನು ಪೊನ್ನಂಪೇಟೆ ಬಸ್ ನಿಲ್ದಾಣದಿಂದ ಕಾಟ್ರಕೊಲ್ಲಿ ರಸ್ತೆಯವರೆಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಸೇರಿದಂತೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಸುAಟಿಕೊಪ್ಪದಲ್ಲಿ ಸಂಭ್ರಮಾಚರಣೆಸುAಟಿಕೊಪ್ಪ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸುಜಾ ಕುಶಾಲಪ್ಪ ಅವರ ಗೆಲುವಿನಿಂದಾಗಿ ಸುಂಟಿಕೊಪ್ಪ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಸುಂಟಿಕೊಪ್ಪ ಬಿಜೆಪಿ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ಪಕ್ಷದ ಧ್ವಜವನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಶಕ್ತಿ ಕೇಂದ್ರ ಪ್ರಮುಖ್ ಬಿ.ಕೆ. ಪ್ರಶಾಂತ್, ಓಬಿಸಿ ತಾಲೂಕು ಸದಸ್ಯ ಪಿ.ಆರ್. ಸುನಿಲ್‌ಕುಮಾರ್, ವಿಶ್ವ ಹಿಂದೂ ಪರಿಷದ್ ಕಾರ್ಯದರ್ಶಿ ಡಿ. ನರಸಿಂಹ, ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ಓಬಿಸಿ ಅಧ್ಯಕ್ಷ ಸಿ.ಸಿ. ಸುನಿಲ್, ಹಿರಿಯ ಕಾರ್ಯರ್ತ ಸಹದೇವ, ಕಾರ್ಯಕರ್ತರುಗಳಾದ ಪುನಿತ್, ಅಶೋಕ ಮತ್ತಿತರರು ಇದ್ದರು.