ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ
ತಮಿಳುನಾಡು, ಡಿ. ೧೫: ತಮಿಳುನಾಡಿನ ಕೂನೂರು ಬಳಿ ತಾ. ೮ ರಂದು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶರಾಗಿದ್ದಾರೆ. ಭಾರತೀಯ ವಾಯುಪಡೆ ಅವರ ಸಾವನ್ನು ಖಚಿತಪಡಿಸಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ ೧೩ ಮಂದಿ ಸಾವನ್ನಪ್ಪಿದ್ದರಾದರೂ ಶರೀರದ ಬಹುತೇಕ ಭಾಗ ಸುಟ್ಟ ಗಾಯಗಳಾಗಿ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದರು. ಅವರಿಗೆ ಆರಂಭದಲ್ಲಿ ತಮಿಳುನಾಡಿನ ವೆಲ್ಲಿಂಗ್ಟನ್ನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಿಧಾನ ಪರಿಷತ್ನ ೧೫ ಕಾಂಗ್ರೆಸ್ ಸದಸ್ಯರು ಅಮಾನತು
ಬೆಳಗಾವಿ, ಡಿ. ೧೫: ಬೆಳಗಾವಿಯಲ್ಲಿ ಕರ್ನಾಟಕ ವಿಧಾನಸಭೆಯ ೩ನೇ ದಿನದ ಅಧಿವೇಶನ ನಡೆಯುತ್ತಿದೆ. ಒಂದು ದಿನದ ಮಟ್ಟಿಗೆ ಕಾಂಗ್ರೆಸ್ನ ೧೫ ವಿಧಾನ ಪರಿಷತ್ ಸದಸ್ಯರನ್ನು ಅಮಾನತು ಮಾಡಲಾಗಿದೆ. ಬುಧವಾರ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಸೇರಿದಂತೆ ೧೫ ಮಂದಿ ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದರು. ಕಲಾಪ ಆರಂಭಗೊAಡಾಗ ಕಾಂಗ್ರೆಸ್ ಸದಸ್ಯರು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ವಿರುದ್ಧದ ಭೂ ಕಬಳಿಕೆ ಆರೋಪಕ್ಕೆ ಸಂಬAಧಿಸಿದAತೆ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದರು. ಆದರೆ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಚರ್ಚೆಗೆ ಅವಕಾಶ ನೀಡುವುದು ಸಾಧ್ಯವಿಲ್ಲ ಎಂದರು. ಆಗ ಸಭಾಪತಿ ಬಸವರಾಜ ಹೊರಟ್ಟಿ ಭೈರತಿ ಬಸವರಾಜ ವಿರುದ್ಧದ ಚರ್ಚೆ ಕೊನೆಗೊಳಿಸಲಾಗಿದೆ ಎಂದು ಪ್ರಕಟಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಪಟ್ಟು ಬಿಡಲಿಲ್ಲ. ಚರ್ಚೆಗೆ ಅವಕಾಶ ನೀಡಬೇಕು ಎಂದು ಧರಣಿ ಆರಂಭಿಸಿದರು. ನಿಯಮಗಳಿಗೆ ವಿರುದ್ಧವಾಗಿ ನಡವಳಿಕೆ ತೋರಿದ ಕಾರಣ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಸೇರಿದಂತೆ ೧೫ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಯಿತು ಮತ್ತು ಕಲಾಪವನ್ನು ಮುಂದೂಡಲಾಯಿತು. ಸÀದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ಸದಸ್ಯರಾದ ಎಸ್.ಆರ್. ಪಾಟೀಲ್, ಪಿ.ಆರ್. ರಮೇಶ್, ನಾರಾಯಣಸ್ವಾಮಿ, ಬಿ.ಕೆ. ಹರಿಪ್ರಸಾದ್, ಪ್ರತಾಪ್ ಚಂದ್ರ ಶೆಟ್ಟಿ, ಯು.ಟಿ. ವೆಂಕಟೇಶ್, ವೀಣಾ ಅಚ್ಚಯ್ಯ, ಸಿ.ಎಂ. ಇಬ್ರಾಹಿಂ ಸೇರಿದಂತೆ ಇತರ ಸದಸ್ಯರನ್ನು ಅಮಾನತು ಮಾಡಲಾಗಿದೆ.
ಹೊಳೆಗೆ ಬಸ್ ಬಿದ್ದು ಅಪಘಾತ: ೯ ಪ್ರಯಾಣಿಕರು ಸಾವು
ಆಂಧ್ರಪ್ರದೇಶ, ಡಿ. ೧೫: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಬಸ್ ಜಲ್ಲೇರುವಾಗು ಎಂಬಲ್ಲಿ ಮೋರಿಯಿಂದ ಹೊಳೆಗೆ ಉರುಳಿ ಬಿದ್ದು ಚಾಲಕ ಸಹಿತ ೯ ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಆಂಧ್ರಪ್ರದೇಶ ಸಾರಿಗೆ ಬಸ್ ನೀರಿಗೆ ಉರುಳಿ ಬಿದ್ದಿದೆ. ಬಸ್ನಲ್ಲಿ ೪೭ ಮಂದಿ ಪ್ರಯಾಣಿಸುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ೫ ತಾಲೂಕುಗಳಲ್ಲಿ ೧೪೪ ಸೆಕ್ಷನ್ ಜಾರಿ
ಮಂಗಳೂರು, ಡಿ. ೧೫: ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗ ನಡೆದ ಲಾಠಿ ಚಾರ್ಜ್ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ೫ ತಾಲೂಕುಗಳಲ್ಲಿ ಸೆಕ್ಷನ್ ೧೪೪ ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಆದೇಶ ಮಾಡಿದ್ದು, ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರುತ್ತದೆ. ತಾ. ೧೪ ರ ರಾತ್ರಿ ಉಪ್ಪಿನಂಗಡಿ ಠಾಣೆಯ ಮುಂಭಾಗ ಪಿಎಫ್ಐ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಅತಿರೇಖಕ್ಕೆ ಹೋಗಿ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ. ಈ ವೇಳೆ ಹತ್ತಕ್ಕೂ ಕಾರ್ಯಕರ್ತರಿಗೆ, ಪೊಲೀಸರಿಗೆ ಗಾಯಗಳಾಗಿವೆ. ಲಾಠಿ ಚಾರ್ಜ್ ವೇಳೆ ನಾಲ್ವರು ಪೊಲೀಸ್ ಅಧಿಕಾರಿ, ಸಿಬ್ಬಂದಿಗೂ ಗಾಯವಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ಐ ಪ್ರಸನ್ನ ಅವರಿಗೆ ಪ್ರತಿಭಟನಾಕಾರರು ಚೂರಿ ಇರಿದ ಆರೋಪ ಕೇಳಿಬಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್, ಮಹಿಳಾ ಎಸ್ಐ ಓಮನ ಹಾಗೂ ಓರ್ವ ಮುಖ್ಯಪೇದೆಗೂ ಗಾಯವಾಗಿದ್ದು, ಗಾಯಾಳುಗಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಹಿತಕರ ಘಟನೆ ಹಿನ್ನೆಲೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಭೇಟಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಶ್ ಸೋನಾವಣೆ ಸೇರಿದಂತೆ ಪೊಲೀಸ್ ಅಧಿಕಾರಿಗಳ ಭಾಗಿಯಾಗಿದ್ದರು. ಲಾಠಿ ಚಾರ್ಚ್ ವೇಳೆ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಠಾಣೆ ಮುಂದೆ ನಿಂತಿದ್ದ ಬೈಕ್, ಪೊಲೀಸ್ ಚೀಪ್ಗೆ ಹಾನಿಯಾಗಿದ್ದು, ಠಾಣೆ ಮುಂದೆ ಪ್ರತಿಭಟನಾಕಾರರ ಚಪ್ಪಲಿಗಳ ರಾಶಿ ಕಂಡುಬAದಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.