ಮಡಿಕೇರಿ, ಡಿ.೧೬: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಡೇ-ನಲ್ಮ್ ಯೋಜನೆಯಡಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆಯನ್ನು ಕೈಗೊಳ್ಳುವ ಸಂಬAಧ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಡೇ-ನಲ್ಮ್ ಯೋಜನೆಯಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ ೨೦೧೪ ರಡಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇಚ್ಚೆವುಳ್ಳ ಫಲಾನುಭವಿಗಳು ಚಾಲ್ತಿಯಲ್ಲಿರುವ ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ವಿದ್ಯಾರ್ಹತೆ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಎರಡು ಭಾವಚಿತ್ರ, ವ್ಯಾಪಾರದ ಭಾವಚಿತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಇನ್ನಿತರೆ ಅವಶ್ಯಕ ದಾಖಲಾತಿಗಳೊಂದಿಗೆ ತಾ. ೨೮ ರೊಳಗೆ ಕುಶಾಲನಗರ ಪಟ್ಟಣ ಪಂಚಾಯಿತಿ ಕಚೇರಿಯ ಡೇ-ನಲ್ಮ್ ಶಾಖೆಗೆ ಸಲ್ಲಿಸುವಂತೆ ಕುಶಾಲನಗರ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.