ಮಡಿಕೇರಿ, ಡಿ. ೧೬: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶೇಷಚೇತನರಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಯನ್ನು ೨೦೨೧-೨೨ ನೇ ಸಾಲಿನಿಂದ ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್ hಣಣಠಿs://ssಠಿ. ಞಚಿಡಿಟಿಚಿಣಚಿಞಚಿ.gov.iಟಿ/ ೨೦೨೧ ರಲ್ಲಿ ಸಲ್ಲಿಸಬೇಕಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಿಮೆಟ್ರಿಕ್ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷಚೇತನÀ ವಿದ್ಯಾರ್ಥಿಗಳು ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನ ಪಡೆಯಲು ಈ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ ಇಲಾಖಾ ಯೋಜನೆಯ ಸೌಲಭ್ಯ ಪಡೆದು ಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಶೇಷ ಚೇತನರ ಕಲ್ಯಾಣಾಧಿಕಾರಿಗಳ ಕಚೇರಿ ದೂ. ೦೮೨೭೨-೨೯೫೮೨೯ ಕ್ಕೆ ಕರೆ ಮಾಡುವಂತೆ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.