ಮಡಿಕೇರಿ, ಡಿ. ೧೭: ಕೊಡಗು ಜಿಲ್ಲೆಯಲ್ಲಿ ಕೃಷಿಗೆ ಪೂರಕವಾದ ಸಂಪನ್ಮೂಲಗಳು ವಿಪುಲವಾಗಿದ್ದು, ಆ ದಿಸೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ಅಭಿವೃದ್ಧಿಗೆ ಗಮನಹರಿಸ ಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಕಾಫಿ ಮಂಡಳಿ ಹಾಗೂ ಬೆಂಗಳೂರಿನ ಕೆಪೆಕ್ ವತಿಯಿಂದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ‘ಆತ್ಮ ನಿರ್ಭರ ಭಾರತ್’ ಅಭಿಯಾನ ಪ್ರಯುಕ್ತ ಪ್ರಧಾನಮಂತ್ರಿ ಅವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ(ಪಿಎಂಎಫ್ಎAಇ) ಯೋಜನೆಯಡಿ ಒಂದು ಜಿಲ್ಲೆಗೆ ಒಂದು ಉತ್ಪನ್ನ ಮತ್ತು ಕೃಷಿ ಮೂಲ ಭೂತ ಸೌಕರ್ಯ ಯೋಜನೆಯ ಬಗ್ಗೆ ಅರಿವು ಮೂಡಿಸುವ ಜಿಲ್ಲಾ ಮಟ್ಟದ ‘ತಾಂತ್ರಿಕ ಕಾರ್ಯಾಗಾರ’ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಕಾಫಿ, ಏಲಕ್ಕಿ, ಕರಿಮೆಣಸು, ಭತ್ತ, ಬಾಳೆ, ಜೇನು ಕೃಷಿ, ಹೀಗೆ ಹಲವು ಕೃಷಿ, ತೋಟಗಾರಿಕೆ ಸಂಪನ್ಮೂಲಗಳು ಯಥೇಚ್ಛವಾಗಿ ದೊರೆಯುತ್ತಿದ್ದು, ಈ ಸಂಪನ್ಮೂಲಗಳ ಸದ್ಬಳಕೆ ಮತ್ತಷ್ಟು ಕೃಷಿಕರಿಗೆ ದೊರೆಯಬೇಕು ಎಂದರು.
‘ಜಿಲ್ಲೆಯಲ್ಲಿ ಹೋಂ ಮೇಡ್ ಚಾಕಲೇಟ್ ತಯಾರಿಸಲಾಗುತ್ತಿದೆ. ಅದೇ ರೀತಿ ಕಾಫಿಯಿಂದ ಜ್ಯೂಸ್ ಮಾಡಬಹುದೇ ಎಂಬ ಬಗ್ಗೆ ಅವಲೋಕನ ನಡೆಯಬೇಕಿದೆ ಎಂದು ಜಿಲ್ಲಾಧಿಕಾರಿ ಅಭಿಪ್ರಾಯ ವ್ಯಕ್ತಪಡಿಸಿದರು.’ ಕೊಡಗು ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಹೀಗೆ ಹಲವು ಕೃಷಿ ಬೆಳೆಗಳನ್ನು ರಫ್ತು ಮಾಡುವ ನಿಟ್ಟಿನಲ್ಲಿ ಕೃಷಿಕರು ನೇರವಾಗಿ ತೊಡಗಿಸಿ ಕೊಂಡು ಆರ್ಥಿಕವಾಗಿ ಮತ್ತಷ್ಟು ಸಫಲರಾಗುವಲ್ಲಿ ಹೆಚ್ಚಿನ ಉತ್ತೇಜನ ನೀಡಬೇಕಿದೆ. ಮೌಲ್ಯಾಧಾರಿತ ಉತ್ಪನ್ನ ಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಕೃಷಿಯನ್ನು ಲಾಭದಾಯಕವಾಗಿ ಮಾಡಿ ರೈತರು ಅಭಿವೃದ್ಧಿಯತ್ತ ದಾಪುಗಾಲು ಹಾಕುವಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಯಬೇಕಿದೆ ಎಂದು ಡಾ. ಬಿ.ಸಿ. ಸತೀಶ ತಿಳಿಸಿದರು. ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ಕೃಷಿ ಇಲಾಖೆಯಲ್ಲಿ ಸಾಕಷ್ಟು ಯೋಜನೆ ಗಳಿದ್ದು, ಈ ಯೋಜನೆ ಗಳನ್ನು ರೈತರು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೃಷಿ, ವಾಣಿಜ್ಯ ಚಟುವಟಿಕೆಗೆ ಬ್ಯಾಂಕುಗ ಳಿಂದಲೂ ಸಹಾಯಧನ ಸೌಲಭ್ಯಗಳು ದೊರೆಯ ಲಿದ್ದು, ಇವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಪುರಸ್ಕೃತ ಕೃಷಿ ಮೂಲ ಸೌಕರ್ಯ ನಿಧಿಯಡಿಯಲ್ಲಿ ಹಣಕಾಸು ಸೌಲಭ್ಯಗಳು, ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಗೋದಾಮುಗಳ ನಿರ್ಮಾಣ, ಪ್ಯಾಕ್ ಹೌಸ್ಗಳು, ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು, ಶೀತಲ ಗೃಹ, ಸಾಗಾಣಿಕೆ ಸೌಲಭ್ಯಗಳು, ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು, ಮೌಲ್ಯಮಾಪನ ಘಟಕಗಳು ಹೀಗೆ ಕೃಷಿ ಚಟುವಟಿಕೆ ಗಳನ್ನು ಹಾಗೂ ಯೋಜನೆಗಳನ್ನು ಬಳಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಖ್ ಮಾತನಾಡಿ ಆತ್ಮ ನಿರ್ಭರ ಭಾರತ ಅಭಿಯಾನ, ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್ಎAಇ) ಯೋಜನೆ ಒಂದು ಜಿಲ್ಲೆಗೆ ಒಂದು ಉತ್ಪನ್ನದ (ಒಡಿಒಪಿ) ವಿಧಾನ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಸುವರ್ಣಾವಕಾಶ ಇದೆ ಎಂದರು.
ವ್ಯಕ್ತಿಗತ ಕಿರು ಉದ್ದಿಮೆಗಳಿಗೆ ಯೋಜನೆಯಡಿ ಪ್ರತಿ ಘಟಕಕ್ಕೆ ರೂ.೧೦ ಲಕ್ಷದ ಗರಿಷ್ಟ ಮಿತಿಯೊಂದಿಗೆ ಅರ್ಹ ಯೋಜನಾ ವೆಚ್ಚದ ಶೇ.೩೫ ರಷ್ಟು ಮೌಲ್ಯದ ಸಾಲ ಸಂಪರ್ಕವಿರುವ ಸಹಾಯಧನ ದೊರೆಯಲಿದೆ ಎಂದು ತಿಳಿಸಿದರು. ರೈತ ಉತ್ಪಾದಕರ ಸಂಸ್ಥೆಗಳು (ಎಫ್ಪಿಒ) ಉತ್ಪಾದಕ ಸೊಸೈಟಿಗಳಿಗೆ ಸಹಾಯಧನ: ಅರ್ಹ ಯೋಜನಾ ವೆಚ್ಚದ ಶೇ.೩೫ ರಷ್ಟು ಮೌಲ್ಯದ ಸಾಲ-ಸಂಪರ್ಕವಿರುವ ಸಹಾಯಧನ. ಸ್ವ ಸಹಾಯ ಸಂಘಗಳ ಸದಸ್ಯರಿಗೆ: ಎಸ್ಎಚ್ಜಿಯ ಪ್ರತಿ ಸದಸ್ಯರಿಗೆ ಕಾರ್ಯನಿರ್ವಹಣಾ ಬಂಡವಾಳ ಹಾಗೂ ಚಿಕ್ಕ ಪರಿಕರ ಗಳನ್ನು ಖರೀದಿಸಲು ಸಾಲವಾಗಿ ರೂ.೪೦ ಸಾವಿರ ಪ್ರಾಥಮಿಕ ಬಂಡವಾಳ. ಹಾಗೆಯೇ ಸಾಮಾನ್ಯ ಮೂಲಭೂತ ಸೌಕರ್ಯಕ್ಕೆ ಬೆಂಬಲದಡಿ ಅರ್ಹ ಯೋಜನಾ ವೆಚ್ಚದ ಶೇ.೩೫ ರಷ್ಟು ಮೌಲ್ಯದ ಸಾಲ ಸಂಪರ್ಕವಿರುವ ಸಹಾಯಧನ. ಬ್ರಾಂಡಿAಗ್ ಹಾಗೂ ಮಾರುಕಟ್ಟೆಗೆ ಬೆಂಬಲ: ಅರ್ಹ ಯೋಜನಾ ವೆಚ್ಚದ ಶೇ.೫೦ ರಷ್ಟು. ಸೌಲಭ್ಯಗಳು ದೊರೆಯಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹೇಳಿದರು.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಮತ್ತು ತ್ವರಿತಗತಿಯಲ್ಲಿ ಅರ್ಜಿ ವಿಲೇವಾರಿ, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತವಾಗಿ ಯೋಜನಾ ಪ್ರಸ್ತಾವನೆ ಸಿದ್ದತೆ ಮತ್ತು ಅರ್ಜಿ ಸಲ್ಲಿಕೆಗೆ ಸಹಾಯ, ಆಹಾರ ಸಂಸ್ಕರಣ ತಾಂತ್ರಿಕತೆಗಳ ಬಗ್ಗೆ ಉಚಿತವಾಗಿ ತರಬೇತಿ ಸಿಎಫ್ಟಿಆರ್ಐ ಮುಂತಾದ ಸಂಸ್ಥೆಗಳಿAದ, ಯೋಜನೆಯಡಿ ಒದಗಿಸುವ ಸಾಲಕ್ಕೆ ಕೇಂದ್ರ ಸರ್ಕಾರದಿಂದ ಕ್ರೆಡಿಟ್ ಗ್ಯಾರಂಟಿ, ಒದಗಿಸುವ ಸಾಲಕ್ಕೆ ಶೇ.೨ ರಷ್ಟು ಬಡ್ಡಿ ಸಹಾಯಧನ ಕಲ್ಪಿಸಲಾಗುತ್ತದೆ ಎಂದರು. ಕೆಪೆಕ್ನ ವ್ಯವಸ್ಥಾಪಕ ನಿರ್ದೇಶಕ ಎಂ.ಎಚ್. ಬಂಥನಾಳ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯು ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಆಯ್ಕೆಯಾಗಿದ್ದು, ಕೃಷಿಕರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಬಳಸಿಕೊಳ್ಳು ವಂತಾಗಬೇಕು ಎಂದರು. ಕೆಪೆಕ್ ಸಂಸ್ಥೆಯ ರಾಜ್ಯ ಯೋಜನಾ ವ್ಯವಸ್ಥಾಪಕರಾದ ದೀಪಕ್ ಸಿನ್ಹಾ ಮಾತನಾಡಿ ಕಾಫಿ ಸೇರಿದಂತೆ ವಿವಿಧ ಬೆಳೆಗಳಿಗೆ ಆತ್ಮನಿರ್ಭರ ಯೋಜನೆ ಯಡಿ ಸಹಾಯಧನ ದೊರೆಯಲಿದ್ದು, ಇವುಗಳನ್ನು ಬಳಸಿಕೊಳ್ಳುವಂತಾಗ ಬೇಕು ಎಂದರು. ಸಿಎಪ್ಟಿಆರ್ಐನ ತರಬೇತಿ ಸಂಯೋಜಕರಾದ ಹೃಷಿಕೇಶ್ ಎ. ತವನಂದಿ ಕಾಫಿ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಕುರಿತು ಮಾಹಿತಿ ನೀಡಿದರು. ಸಿಎಫ್ಟಿ ಆರ್ಐನ ರಾಘವೇಂದ್ರ ಅವರು ಮಾತನಾಡಿ ಕೃಷಿ ಮತ್ತು ಮೌಲ್ಯ ವರ್ಧಿತ ಉತ್ಪನ್ನಗಳ ಉತ್ತೇಜನಕ್ಕೆ ಒತ್ತು ನೀಡಬೇಕಿದೆ. ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನಾಲಯ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಿದೆ ಎಂದರು. ಕಾಫಿ ಮಂಡಳಿಯ ಉಪ ನಿರ್ದೇಶಕ ಶಿವಕುಮಾರ್ ಸ್ವಾಮಿ ಅವರು ಕಾಫಿಯಲ್ಲಿ ಮೌಲ್ಯವರ್ಧನೆ ಮತ್ತು ಅವಕಾಶಗಳ ಕುರಿತು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಶೇ. ೨೯ ರಷ್ಟು ಕಾಫಿ ಕೃಷಿ ಕೈಗೊಳ್ಳಲಾಗಿದೆ ಎಂದರು. ‘ಕೊಡಗು ಜಿಲ್ಲೆ ಕಾಫಿ ಬೆಳೆ ಉತ್ಪಾದನೆಯಲ್ಲಿ ರಾಜ್ಯದಲ್ಲಿ ಶೇ. ೫೦ ರಷ್ಟು ಮತ್ತು ರಾಷ್ಟçದಲ್ಲಿ ಶೇ.೩೫ ರಷ್ಟು ಉತ್ಪಾದನೆ ಮಾಡಲಾಗುತ್ತಿದೆ. ರೈತರಿಗೆ ಹೆಚ್ಚಿನ ಸಹಾಯಧನ ಕಲ್ಪಿಸುವಲ್ಲಿ ಅಗತ್ಯ ಕ್ರಮವಹಿಸಲಾಗಿದೆ ಎಂದರು.’
ನಬಾರ್ಡ್ನ ಜಿಲ್ಲಾ ವ್ಯವಸ್ಥಾಪಕ ಬಿ.ವಿ. ರಮೇಶ್ ಬಾಬು ಮಾತನಾಡಿ, ಪ್ರಧಾನಮಂತ್ರಿ ಅವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿ ಹಾಗೂ ಕೃಷಿ ಮೂಲಭೂತ ಸೌಕರ್ಯ ಯೋಜನೆಯಡಿ ನಬಾರ್ಡ್ನಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಬ್ಯಾಂಕ್ ಆಫ್ ಬರೋಡಾದ ಮುಖ್ಯ ವ್ಯವಸ್ಥಾಪಕ ಲಕ್ಷಿö್ಮÃಕಾಂತ ನಾಯಕ್ ಪಿ.ಎಂಎಫ್ಎAಇ ಯೋಜನೆಗಳಲ್ಲಿ ಬ್ಯಾಂಕ್ ವತಿಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಸಿ.ಎನ್. ರಘು ಆಹಾರ ಸಂಸ್ಕರಣಾ ಘಟಕಗಳು, ಕೈಗಾರಿಕಾ ನೀತಿಗಳು, ಕೈಗಾರಿಕಾ ಕೇಂದ್ರಗಳಿAದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕೊಡಗು ಪ್ಲಾಂಟರ್ಸ್ ಅಸೋಷಿಯೇಷನ್ನ ಅಧ್ಯಕ್ಷ ಬಿ.ವಿ. ಮೋಹನ್ ದಾಸ್ ಪ್ರಶ್ನೋತ್ತರ ಅವಧಿಯಲ್ಲಿ ಕೃಷಿಕರಿಗೆ ಹೆಚ್ಚಿನ ಸೌಲಭ್ಯ ದೊರೆಯಬೇಕು. ಕೃಷಿಕರೇ ನೇರವಾಗಿ ತಾವು ಉತ್ಪಾಧಿಸಿದ ಉತ್ಪನ್ನಗಳನ್ನು ರಫ್ತು ಮಾಡುವಂತಾ ಗಬೇಕು. ಆ ನಿಟ್ಟಿನಲ್ಲಿ ಉತ್ತೇಜನ ನೀಡಬೇಕಿದೆ ಎಂದರು. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮತ್ತು ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಕೃಷಿ ಇಲಾಖೆಯಿಂದ ಹೊರ ತರಲಾಗಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎAಇ) ಯೋಜನೆಯ ಕರಪತ್ರ ಹಾಗೂ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಿದರು. ಕಾರ್ಯಾಗಾರ ಆರಂಭಕ್ಕೂ ಮೊದಲು ರೈತಗೀತೆ ಹಾಡಲಾಯಿತು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಉದ್ದಿಮೆ ದಾರರು ಇತರರು ಇದ್ದರು. ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಗಿರೀಶ್, ಸಹಾಯಕ ನಿರ್ದೇಶಕರಾದ ನಾರಾಯಣ ರೆಡ್ಡಿ ನಿರೂಪಿಸಿದರು.