ಮಡಿಕೇರಿ, ಡಿ. ೧೭: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿ ಹಮ್ಮಿಕೊಂಡಿದೆ.
೨೦೨೧-೨೨ ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ಮಾಹೆಯಾನ ೧೫ ಸಾವಿರ ರೂ. ಗಳ ಸ್ಟೆöÊಫಂಡ್ ನೀಡಲಾಗುತ್ತದೆ. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುತ್ತದೆ.
ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕ ದಂದು ೪೦ ವರ್ಷ ದೊಳಗಿರಬೇಕು. ಅರ್ಜಿಯೊಂದಿಗೆ ಎಸ್‌ಎಸ್ ಎಲ್‌ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ೨ ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿಯ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಅರ್ಜಿ ಸಲ್ಲಿಸಲು ತಾ. ೨೧ ಕಡೆ ದಿನವಾಗಿದೆ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಸ್ಟುವರ್ಟ್ ಹಿಲ್ಸ್ ರಸ್ತೆ, ಮಡಿಕೇರಿ ಇಲ್ಲಿ ಪಡೆಯಬಹುದಾಗಿದೆ.