ಸೋಮವಾರಪೇಟೆ, ಡಿ. ೧೭: ಸೋಮವಾರಪೇಟೆ ಉಪ ವಿಭಾಗಕ್ಕೆ ಒಳಪಡುವ ಸೋಮವಾರಪೇಟೆ, ಶಾಂತಳ್ಳಿ, ಶನಿವಾರಸಂತೆ, ಕೊಡ್ಲಿಪೇಟೆ ಮತ್ತು ಆಲೂರು ಸಿದ್ದಾಪುರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸಲು ತಾ. ೧೮ ರಂದು (ಇಂದು) ಗ್ರಾಹಕರ ಸಭೆ ಆಯೋಜಿಸಲಾಗಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.
ತಾ. ೧೮ ರಂದು ಪೂರ್ವಾಹ್ನ ೧೧ ಗಂಟೆಗೆ ಸೋಮವಾರಪೇಟೆ ಉಪ ವಿಭಾಗದ ಆವರಣದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.