ಕುಶಾಲನಗರ, ಡಿ. ೧೮: ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆಗೆ ಕಾರ್ಯಕ್ರಮದಲ್ಲಿ ಕುಶಾಲನಗರ ಹೋಬಳಿ ಮಾದಾಪಟ್ಟಣ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಇನ್ನೂರಕ್ಕೂ ಅಧಿಕ ಅಹವಾಲುಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಯಿತು.

ಮಾದಪಟ್ಟಣ ಗ್ರಾಮದ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಡಾ ಬಿ.ಸಿ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಕಂದಾಯ, ಮತ್ತು ವಿವಿಧ ಇಲಾಖೆಗಳ ಸಂಬAಧಿಸಿದAತೆ ಹಲವು ಅಹವಾಲುಗಳು ಕೇಳಿಬಂದವು.

ಪಹಣಿಯಲ್ಲಿನ ಲೋಪದೋಷಗಳ ತಿದ್ದುಪಡಿ, ಸರ್ಕಾರದ ಯೋಜನೆಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಸ್ಮಶಾನ ಸೌಲಭ್ಯ ಕಲ್ಪಿಸುವುದು, ಆಶ್ರಯ ಯೋಜನೆಯಲ್ಲಿ ಜಮೀನು ಕಾಯ್ದಿರಿಸುವ ಬಗ್ಗೆ, ಪ್ರಕೃತಿ ವಿಕೋಪದಿಂದ ಹಾನಿಯಾದ ಮನೆಗಳಿಗೆ ಪರಿಹಾರ ಹಾಗೂ ಬೆಳೆಹಾನಿ ಪರಿಹಾರ ದರಕಾಸ್ತು ಮಂಜೂರಾದ ಜಮೀನುಗಳ ದುರಸ್ತಿ ಮತ್ತಿತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಪ್ರಸ್ತಾಪಗೊಂಡವು.

ಸುಮಾರು ಇನ್ನೂರಕ್ಕೂ ಅಧಿಕ ಸಮಸ್ಯೆಗಳ ಬಗ್ಗೆ ಪರಿಹಾರ ಕೋರಿ ನಾಗರಿಕರು ಅರ್ಜಿ ಸಲ್ಲಿಸಿದ್ದು ಕಂಡುಬAತು.

ಮಾದಪಟ್ಟಣ ಗ್ರಾಮದಲ್ಲಿ ಸ್ಮಶಾನದ ಜಾಗದ ಕೊರತೆ ಇರುವ ಬಗ್ಗೆ ಅಲ್ಲಿನ ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಅಕ್ರಮ ಒತ್ತುವರಿ ತೆರವುಗೊಳಿಸಿ ಸ್ಮಶಾನಕ್ಕೆ ಭೂಮಿ ನೀಡುವ ಬಗ್ಗೆ ಆದ್ಯತೆ ಕಲ್ಪಿಸಲಾಗುವುದು ಎಂದು ಈ ಸಂದರ್ಭ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಜಿಲ್ಲೆಯ ೧೫೮ ಗ್ರಾಮಗಳಲ್ಲಿ ಅರವತ್ತು ಗ್ರಾಮಗಳ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಇನ್ನೂ ಸೂಕ್ತ ಜಾಗ ದೊರಕಿಲ್ಲ. ಈ ಬಗ್ಗೆ ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.

ವಸತಿ ರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸಹಾಯಧನ ನೀಡಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಸರ್ಕಾರಿ ಭೂಮಿ ಒತ್ತುವರಿ ಇದ್ದಲ್ಲಿ ಸರ್ವೆ ಕಾರ್ಯ ನಡೆಸಿ ಹೆಚ್ಚುವರಿ ಭೂಮಿ ಕಂಡುಬAದಲ್ಲಿ ತೆರವು ಮಾಡುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಪಶುವೈದ್ಯ ಇಲಾಖೆಗೆ ಸಂಬAಧಿಸಿದAತೆ ಬಂದ ಅಹವಾಲಿಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು, ಗ್ರಾಮ ವ್ಯಾಪ್ತಿಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕ ಮಾಡುವ ಬಗ್ಗೆ ಸರ್ಕಾರ ಚಿಂತನೆ ಹರಿಸಿದೆ ಎಂದು ಮಾಹಿತಿ ಒದಗಿಸಿದರು.

ಇದೇ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸತೀಶ್ ಕುಶಾಲನಗರ ತಾಲೂಕು ಸಮರ್ಪಕ ನಿರ್ವಹಣೆಗೆ ಕಚೇರಿಗಳಿಗೆ ಕಟ್ಟಡಗಳ ಮತ್ತು ಸ್ಥಳಾವಕಾಶದ ಕೊರತೆ ಕಂಡುಬAದಿದೆ. ಮಿನಿ ವಿಧಾನಸೌಧ ನಿರ್ಮಾಣಕ್ಕೆ ಈಗಾಗಲೇ ಸ್ಥಳ ಗುರುತಿಸಲಾಗಿದೆ. ಕೆರೆ ಒತ್ತುವರಿ ತೆರವು ಕಾರ್ಯಾಚರಣೆಗೆ ಈಗಾಗಲೇ ಸರ್ಕಾರ ಮುಂದಾಗಿದ್ದು ಕೆರೆಗಳ ಮಾಹಿತಿ ಪಡೆಯಲು ಸರ್ವೆ ಕಾರ್ಯ ನಡೆಯುತ್ತಿದೆ. ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಅಹವಾಲು ಬಂದ ಸಂದರ್ಭ ಉತ್ತರಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ಸದ್ಯದಲ್ಲೇ ಸಭೆ ನಡೆಸಲಾಗುವುದು ಎಂದು ಹೇಳಿದರು.

ಸಭೆಗೂ ಮುನ್ನ ಜಿಲ್ಲಾಧಿಕಾರಿಗಳು ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡವನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಶಾಲೆಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಕ್ಕಳೊಂದಿಗೆ ಚರ್ಚಿಸಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜಣ್ಣ, ಕಾರ್ಯನಿರ್ವಾಹಕ ಅಧಿಕಾರಿ ಜಯಣ್ಣ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ, ಪಶುವೈದ್ಯ ಇಲಾಖೆ, ಕೃಷಿ, ಸಾರಿಗೆ, ಕಾರ್ಮಿಕ, ತೋಟಗಾರಿಕೆ, ಅಲ್ಪಸಂಖ್ಯಾತರ ಗಣಿ ಮತ್ತು ಭೂವಿಜ್ಞಾನ, ಅರಣ್ಯ, ಪೊಲೀಸ್, ಕಾವೇರಿ ನೀರಾವರಿ ನಿಗಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ತಾಲೂಕು ತಹಶೀಲ್ದಾರ್ ಪ್ರಕಾಶ್ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ತಹಶೀಲ್ದಾರ್ ಶಿವಪ್ಪ ಅವರು ಸ್ವಾಗತಿಸಿ ವಂದಿಸಿದರು.