ನಾಪೋಕ್ಲು, ಡಿ. ೧೮: ಭಾರತೀಯ ಜನತಾ ಪಾರ್ಟಿಯ ಬಲ್ಲಮಾವಟಿ ಶಕ್ತಿ ಕೇಂದ್ರದ ವತಿಯಿಂದ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸಿ.ಡಿ.ಎಸ್. ಜನರಲ್ ಬಿಪಿನ್ ರಾವತ್ ಹಾಗೂ ಇತರ ಸೇನಾಧಿಕಾರಿಗಳಿಗೆ ಶದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭ ಶಕ್ತಿ ಕೇಂದ್ರದ ಪ್ರಮುಖ ಚಂಗೇಟಿರ ಕುಮಾರ್ ಸೋಮಣ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮನು ಮುತ್ತಪ್ಪ, ಜಿಲ್ಲಾ ಸಮಿತಿ ಸದಸ್ಯ ಲವ ನಾಣಯ್ಯ, ಸಾಮಾಜಿಕ ಜಾಲತಾಣದ ಕರವಂಡ ಅಪ್ಪಣ್ಣ, ವಿವಿಧ ಬೂತ್ ಸಮಿತಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, ಕಾರ್ಯಕರ್ತರು ಹಾಜರಿದ್ದರು.