ಮಡಿಕೇರಿ, ಡಿ. ೧೮: ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಶೀಲರಾದ ಸುಜಾಕುಶಾಲಪ್ಪ ಅವರು ಇಂದು ಮಕ್ಕಂದೂರುವಿಗೆ ಆಗಮಿಸಿ ಶ್ರೀ ಭದ್ರಕಾಳೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ನಂತರ ವಿಜಯೋತ್ಸವವನ್ನು ಆಚರಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಪ್ರಧಾನ ಕಾರ್ಯದರ್ಶಿ ರವಿ ಕಾಳಪ್ಪ, ಶಕ್ತಿ ಕೇಂದ್ರದ ಅಧ್ಯಕ್ಷ ಸುನಿಲ್, ಗ್ರಾ.ಪಂ. ಸದಸ್ಯರುಗಳಾದ ಬಿ.ಎನ್. ರಮೇಶ್, ಬಿ.ಎಸ್. ವಿಮಲ, ಬೂತ್ ಅಧ್ಯಕ್ಷ ಚಂದ್ರಶೇಖರ್, ಮಕ್ಕಂದೂರು ಬಿಜೆಪಿಯ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.