ಸೋಮವಾರಪೇಟೆ, ಡಿ. ೧೮: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಜೇಸೀ ವೇದಿಕೆಯಲ್ಲಿ ಧರಣಿ ನಡೆಸುತ್ತಿರುವ ರೈತ ಸಂಘದ ಪದಾಧಿಕಾರಿಗಳ ಹೋರಾಟವು ಐದನೇ ದಿನಕ್ಕೆ ಕಾಲಿಟ್ಟಿದ್ದು, ನಗರ ಕಾಂಗ್ರೆಸ್‌ನಿAದ ಧರಣಿಗೆ ಬೆಂಬಲ ಸೂಚಿಸಲಾಯಿತು.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ರೈತ ಸಂಘದಿAದ ಧರಣಿ ನಡೆಯುತ್ತಿದ್ದು, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು, ಬ್ಲಾಕ್ ಉಪಾಧ್ಯಕ್ಷ ಮಂಜುನಾಥ್, ನಗರ ಕಾರ್ಯದರ್ಶಿ ಮಹಮ್ಮದ್ ಶಫಿ, ಸಹ ಕಾರ್ಯದರ್ಶಿ ರಘು, ಉಪಾಧ್ಯಕ್ಷ ಜಮೀರ್, ತಾಲೂಕು ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಬಸವರಾಜು, ಧರ್ಮ, ಅಜಯ್ ಸೇರಿದಂತೆ ಇತರರು ಧರಣಿಯಲ್ಲಿ ಭಾಗಿಯಾಗಿದ್ದರು.