ಕೂಡಿಗೆ, ಡಿ. ೧೮: ಕೂಡಿಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕೂಡಿಗೆ ಸರ್ಕಲ್ನಿಂದ ಹಳೆ ಕೂಡಿಗೆ ಮತ್ತು ಸೋಮವಾರಪೇಟೆ ರಸ್ತೆಯ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇವುಗಳಿಂದಾಗಿ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆ ಅಗುತ್ತಿವೆ. ಈ ಭಾಗದಲ್ಲಿ ಮೂರು ಪ್ರಾಥಮಿಕ ಶಾಲೆಗಳಿದ್ದು, ಕಳೆದ ಒಂದುವಾರದಿAದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನಾಯಿ ಕಚ್ಚಿದ ಘಟನೆ ನಡೆದಿದೆ. ಇದರ ಜೊತೆಯಲ್ಲಿ ಹುಚ್ಚು ನಾಯಿಯ ಕಾಟ ಇರುವುದಾಗಿ ಸಾರ್ವಜನಿಕರು ಈಗಾಗಲೇ ಗ್ರಾಮ ಪಂಚಾಯಿತಿಗೆ ತಿಳಿಸಿದ್ದಾರೆ. ಈ ವ್ಯಾಪ್ತಿಯ ವಿದ್ಯಾರ್ಥಿಗಳ ಪೋಷಕರು ಭಯಭೀತರಾಗಿರುತ್ತಾರೆ. ಗ್ರಾಮ ಪಂಚಾಯಿತಿಯಿAದ ತುರ್ತಾಗಿ ಬೀದಿ ನಾಯಿಗಳನ್ನು ಹಿಡಿಯಲು ಕ್ರಮ ತೆಗೆದುಕೊಳ್ಳುವಂತೆ ಸದಸ್ಯರುಗಳಾದ ಶಿವಕುಮಾರ್, ವಾಣಿ, ಅರುಣುರಾವ್, ಅನಂತ್ ಒತ್ತಾಯ ಮಾಡಿದರು.
ಸಭೆಯಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚು ಅದÀ್ಯತೆ ನೀಡುವ ಮತ್ತು ರೋಗ ನಿರೋಧಕದ ಬಗ್ಗೆ ಗ್ರಾಮಸ್ಥರಿಗೆ ತಿಳುವಳಿಕೆ ನೀಡುವುದು. ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವ ಬಗ್ಗೆ ಚರ್ಚೆಗಳು ನಡೆದವು.
ಸಭೆಯಲ್ಲಿ ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ಬಗ್ಗೆ ಕ್ರಿಯಾ ಯೋಜನೆ ಪಟ್ಟಿಗಳ ವಿವರಗಳನ್ನು ಮಂಡಿಸಿ ಅದರ ಅನುಷ್ಠಾನಕ್ಕೆ ವಿವಿಧ ಹಂತದ ಮಾಹಿತಿ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.
ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಅವಕಾಶವಿದ್ದು, ಅದರ ಸದುಪಯೋಗ ಪಡಿಸಿಕೊಳ್ಳಲು ಅಭಿವೃದ್ಧಿ ಅಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ಸದಸ್ಯರುಗಳಾದ ರಮೇಶ್, ಹೆಚ್.ಎಸ್. ರವಿ, ಗಿರೀಶ್, ಜಯಶ್ರೀ, ಜಯಶೀಲಾ ಸೇರಿದಂತೆ ಸರ್ವ ಸದಸ್ಯರು ಹಾಗೂ ಕಂದಾಯ ವಸೂಲಿಗಾರ ಅನಿಲ್ ಹಾಜರಿದ್ದರು.