ಕುಶಾಲನಗರ, ಡಿ. ೧೮ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಕುಶಾಲನಗರದ ಟಿ.ಡಿ ಗೋವಿಂದರಾಜ್ ದಾಸ್ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ಅವರ ಶಿಫಾರಸಿನ ಮೇರೆಗೆ ಆಯ್ಕೆ ನಡೆದಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.