ಕೂಡಿಗೆ, ಡಿ. ೧೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಕಂದಾಯ ವಸೂಲಾತಿ ಮಾಸಾಚರಣೆ ಕಾರ್ಯಕ್ರಮವು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಇಂದಿರಾ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕೈಗಾರಿಕಾ ಘಟಕಗಳು ಮತ್ತು ವಾಣಿಜ್ಯ ಕೇಂದ್ರಗಳಿದ್ದು, ಅಲ್ಲದೆ ಮನೆ ಕಂದಾಯ ಮತ್ತು ನೀರಿನ ತೆರಿಗೆಯನ್ನು ಕಡ್ಡಾಯವಾಗಿ ಕಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಪೂರಕವಾಗಿ ಸಹಕಾರ ನೀಡಬೇಕೆಂದು ಅಭಿವೃದ್ಧಿ ಅಧಿಕಾರಿ ಸಂತೋಷ್ ಕೋರಿದರು.
ಮಾಸಾಚರಣೆ ಕಾರ್ಯಕ್ರಮದ ಅಡಿಯ ಈ ತಿಂಗಳಲ್ಲಿ ಹೆಚ್ಚು ಕಂದಾಯವನ್ನು ವಸೂಲಿ ಮಾಡುವ ಮೂಲಕ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವುದು. ಇದಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು ತಮ್ಮ ತಮ್ಮ ವಾರ್ಡ್ನ ಗ್ರಾಮಸ್ಥರಿಗೆ ತಿಳಿಸುವ ಮೂಲಕ ಸಂದಾಯ ಮಾಡಲು ಸಹಕಾರ ನೀಡಬೇಕೆಂದು ತಿಳಿಸಿದರು.
ಈ ಸಂದರ್ಭ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಸೇರಿದಂತೆ ಸದಸ್ಯರು ಹಾಜರಿದ್ದರು.