ಕೂಡಿಗೆ, ಡಿ. ೧೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದರಾ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮೊದಲಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಸದಸ್ಯರುಗಳಲ್ಲಿ ಮನವಿಯಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಕಂದಾಯವನ್ನು ಪಾವತಿಸುವಂತೆ ಮತ್ತು ಸಾರ್ವಜನಿಕರು ನೀರಿನ ತೆರಿಗೆ ಮತ್ತು ವ್ಯಾಪಾರ ಪರವಾನಿಗೆಯನ್ನು ನವೀಕರಣ ಮಾಡಿಕೊಳ್ಳಲು ಆಯಾ ಭಾಗದ ಸದಸ್ಯರು ಸ್ಥಳೀಯರಿಗೆ ತಿಳಿಸಬೇಕು ಎಂದರು.

ನAತರ ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ತಮ್ಮ ವಾರ್ಡ್ ಸಮಸ್ಯೆಗಳ ಜೊತೆಗೆ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಸುರ್ದೀಘವಾದ ಚರ್ಚೆಗಳು ನಡೆದವು.

೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ಬಗ್ಗೆ ಕ್ರಿಯಾಯೋಜನೆ ಮತ್ತು ವಿವಿಧ ಕಾಮಗಾರಿಗಳ ಬಗ್ಗೆ ಸದಸ್ಯರು ಮಾಹಿತಿಯನ್ನು ಪಡೆದು ಚರ್ಚಿಸಿದರು. ನಂತರ ಗ್ರಾಮದ ಪ್ರಮುಖ ವಿಷಯಗಳ ಕುರಿತಾದ ಚರ್ಚೆಗಳು ನಡೆದವು

ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಸೇರಿದಂತೆ ಸದಸ್ಯರು ಹಾಜರಿದ್ದರು.