ಮಡಿಕೇರಿ, ಡಿ. ೧೯: ನಗರಸಭೆ ವತಿಯಿಂದ ಡೇ-ನಲ್ಮ್ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ ಅಧಿನಿಯಮ ೨೦೧೪ ರಡಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಯು ತಾ. ೨೦ ರಿಂದ ನಡೆಯಲಿದೆ ಎಂದು ಪೌರಾಯುಕ್ತ ಎಸ್.ವಿ. ರಾಮದಾಸ್ ತಿಳಿಸಿದ್ದಾರೆ. ನಗರದ ಎಲ್ಲಾ ಬೀದಿಬದಿ ವ್ಯಾಪಾರಿಗಳು ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ತಮ್ಮ ಇತ್ತೀಚಿನ ಭಾವಚಿತ್ರ-೨, ತಮ್ಮ ವ್ಯಾಪಾರದ ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕ ದಾಖಲಾತಿಗಳನ್ನು ಸಮೀಕ್ಷೆ ಮಾಡಲು ಬರುವ ಸಮೀಕ್ಷೆದಾರರಿಗೆ ನೀಡುವಂತೆ ಪೌರಾಯುಕ್ತರು ಕೋರಿದ್ದಾರೆ.