ಮಡಿಕೇರಿ, ಡಿ. ೧೯: ಪ್ರಸಕ್ತ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಟ ೫ ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ೨೦೨೧-೨೨ ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ.
ಜನವರಿ ೧, ೨೦೨೧ ರಿಂದ ಡಿಸೆಂಬರ್ ೩೧, ೨೦೨೧ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ ೫ ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟು ಕೊಳ್ಳಲಾಗುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಮತ್ತು ಆಯ್ಕೆಗೆ ಸಂಬAಧಿಸಿದAತೆ ಸಮಿತಿಯ ತೀರ್ಮಾನವೇ ಅಂತಿಮವಾಗಿದೆ. ಈ ಪ್ರಶಸ್ತಿ ಪ್ರದಾನವನ್ನು ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯಂದು ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳಗಳಲ್ಲಿ ಏರ್ಪಡಿಸಲಾಗುವುದು.
ಇದಕ್ಕೆ ಸಂಬAಧಿಸಿದ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿಂದ ಪಡೆದು ತಾ. ೩೧ ರೊಳಗೆ ಈ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: ೯೪೮೨೧೯೪೧೦೫, ೯೪೮೧೪೬೯೧೪೯ ನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ ತಿಳಿಸಿದ್ದಾರೆ.
ಕೌಶಲ್ಯ ತರಬೇತಿಗೆ
ಕೋವಿಡ್-೧೯ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ತಾಂತ್ರಿಕ ಸಿಬ್ಬಂದಿಗಳ ಅಗತ್ಯವಿದೆ. ಭಾರತ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ವತಿಯಿಂದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ-೩.೦ ರಡಿಯಲ್ಲಿ ಆರೋಗ್ಯ ಸೇವೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ನಾಲ್ಕು ತಿಂಗಳ ಅವಧಿಯವರೆಗೆ ಜಿಲ್ಲಾ ತರಬೇತಿ ಕೇಂದ್ರ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ) ಜಿಲ್ಲಾ ಆಸ್ಪತ್ರೆಗಳಲ್ಲಿ ತರಬೇತಿ ಆಯೋಜಿಸಲಾಗಿದೆ.
ತರಬೇತಿ ಪಡೆಯಲು ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳನ್ನು hಣಣಠಿs://ಜಿoಡಿms.gಟe/ಜಠಿPಠಿಡಿqo೬ಏಒಖಆಓರಿಜe೭ ಗೂಗಲ್ ಲಿಂಕ್ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ. ೨೨, ಜಿಲ್ಲಾಧಿಕಾರಿ ಅವರÀ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಕೊನೆಯ ದಿನಾಂಕದೊಳಗಾಗಿ ನೋಂದಣಿ ಮಾಡಿಕೊಳ್ಳಬಹುದು.
ಭಾರತ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ನಿಗದಿಪಡಿಸಿರುವ ತರಬೇತಿ ಸಂಯೋಜನೆಗಳ ವಿವರ ಇಂತಿದೆ. ಎಮರ್ಜೆನ್ಸಿ ಮೆಡಿಕಲ್ ಟೆಕ್ನೀಷಿಯನ್-ಬೇಸಿಕ್ ದ್ವಿತೀಯ ಪಿ.ಯು.ಸಿ ಹಾಗೂ ಜನರಲ್ ಡ್ಯೂಟಿ ಅಸಿಸ್ಟೆಂಟ್ (ಜಿಡಿಎ) ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.
ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಯು ಖಾಸಗಿ ಅಭ್ಯರ್ಥಿಗಳಿಗೆ ಮತ್ತು ನಿರುದ್ಯೋಗಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಯುವಕ-ಯುವತಿಯರಿಗೆ ೬ ತಿಂಗಳ ಅವಧಿಯ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್” ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಜನವರಿ-೨೦೨೨ ರಿಂದ ಪ್ರಾರಂಭವಾಗುತ್ತದೆ. ತರಬೇತಿಗೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಸಾಮಾನ್ಯ ಅಭ್ಯರ್ಥಿಗಳಿಗೆ ಮಾಹೆಯಾನ ರೂ.೪೦೦ ಶಿಷ್ಯವೇತನ ಹಾಗೂ ನಿರುದ್ಯೋಗಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.೫೦೦ ಶಿಷ್ಯವೇತನ ಮತ್ತು ಉಚಿತ ವಸತಿ ಗೃಹದ ವ್ಯವಸ್ಥೆ ಇದೆ. ಅರ್ಜಿ ಸಲ್ಲಿಸಲು ತಾ. ೩೧ ಕೊನೆ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಅಬ್ಭಿಪಾಲ್ಸ್ ರಸ್ತೆ, ಮುತ್ತಪ್ಪ ದೇವಸ್ಥಾನ ಹತ್ತಿರ, ಮಡಿಕೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ: ೯೪೪೯೨೪೫೦೨೪, ೮೭೬೨೧೧೦೯೫೨, ೭೨೫೯೭೨೯೧೦೪, ೮೭೬೨೯೨೫೮೬೨ ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.