ಸೋಮವಾರಪೇಟೆ, ಡಿ. ೧೯: ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರು ಗೆಲುವು ಸಾಧಿಸಿದ ಅಂಗವಾಗಿ ಸೋಮವಾರಪೇಟೆಯಲ್ಲಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಪಟ್ಟಣದ ಕಕ್ಕೆಹೊಳೆ ಜಂಕ್ಷನ್‌ನಿAದ ಅಬ್ಬರದ ಸಂಗೀತ, ಪಟಾಕಿ ಸಿಡಿತದೊಂದಿಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಿಜೆಪಿ ಪರ ಜಯಘೋಷ ಮೊಳಗಿಸಿದರು. ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ನೂತನ ಎಂಎಲ್‌ಸಿ ಸುಜಾ ಕುಶಾಲಪ್ಪ ಅವರು ಪಕ್ಷದ ಕಾರ್ಯಕರ್ತರೊಂದಿಗೆ, ವಾಲಗಕ್ಕೆ ಭರ್ಜರಿ ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯಲ್ಲಿ ಭಾಗಿಯಾದರು.

ಪಕ್ಷದ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ, ಮಂಡಲ ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ರಾಜ್ಯ ಸಮಿತಿಯ ಮಹೇಶ್ ತಿಮ್ಮಯ್ಯ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಮುಖಂಡರಾದ ಕಿಬ್ಬೆಟ್ಟ ಮಧು, ಅಭಿಮನ್ಯುಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.