ಮಡಿಕೇರಿ, ಡಿ.೨೦: ಮಹಾ ರಾಷ್ಟçದಲ್ಲಿ ಎಂ.ಇ.ಎಸ್. ಹಾಗೂ ಶಿವಸೇನೆ ಸಂಘಟನೆಯಿAದ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾ.೨೧ ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಕೆ.ಜಗದೀಶ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆಯಾಗಿದ್ದು, ಸರ್ವ ಕನ್ನಡಿಗರು, ಕನ್ನಡ ಪರ ಸಂಘಟನೆಗಳು, ಎಲ್ಲಾ ಸಂಘ, ಸಂಸ್ಥೆಗಳು, ಆಟೋ, ಟ್ಯಾಕ್ಸಿ, ಲಾರಿ ಸೇರಿದಂತೆ ವಾಹನ ಮಾಲೀಕರ, ಚಾಲಕರ ಸಂಘ, ಎಲ್ಲಾ ವರ್ತಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕನ್ನಡಿಗರ ಮೇಲೆ ನಿರಂತರ ದಬ್ಬಾಳಿಕೆ ನಡೆಸುತ್ತಿ ರುವ, ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಅವಮಾನ ಮಾಡಿರುವ ಮತ್ತು ಹೋರಾಟಗಾರರ ಪ್ರತಿಮೆಗೆ ಹಾನಿಯುಂಟು ಮಾಡಿ ಅಶಾಂತಿ ಮೂಡಿಸುತ್ತಿರುವ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ.