ನಾಪೋಕ್ಲು, ಡಿ. ೨೦ : ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಆದರೆ, ಕೊರೊನಾ ಕಡಿಮೆಯಾದ ಕಾರಣ ಇತರ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗಳು ಭೇಟಿ ನೀಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಆದರೆ, ತಡಿಯಂಡಮೋಳ್ ಬೆಟ್ಟಕ್ಕೆ ತೆರಳಲು ಮಾತ್ರ ಅರಣ್ಯ ಇಲಾಖೆ ಅವಕಾಶ ನೀಡುತ್ತಿಲ್ಲ.
ಜಿಲ್ಲೆಯ ಚಾರಣಿಗರಿಗಾದರೂ ಅರಣ್ಯ ಇಲಾಖೆ ಪ್ರವೇಶಕ್ಕೆ ಅನುಮತಿ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ತಡಿಯಂಡಮೋಳ್ ರಸ್ತೆಯಲ್ಲಿ ಧರಣಿ ನಡೆಸಲಾಗುವದು ಎಂದು ಮಡಿಕೇರಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ ಆಗ್ರಹಿಸಿದ್ದಾರೆ.