ಮಡಿಕೇರಿ, ಡಿ. ೧೯: ಜಿಲ್ಲೆಯ ಮರಾಠ/ ಮರಾಟಿ ಸಮಾಜ ಬಾಂಧವರಿಗಾಗಿ ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮನೋರಂಜನಾ ಸಂಘ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ಆಶ್ರಯದಲ್ಲಿ ತಾ.೨೫, ೨೬ ರಂದು ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ೭ನೇ ವರ್ಷದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಯುವಕ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ ೯ ಗಂಟೆಗೆ ಜಿಲ್ಲಾ ಮರಾಠ/ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಎA. ಪರಮೇಶ್ವರ್‌ರವರ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡಾಕೂಟವನ್ನು ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿಲಿದ್ದಾರೆ. ಕಾರ್ಯಕ್ರಮದಲ್ಲಿ ಮದೆ ಗ್ರಾ.ಪಂ. ಸದಸ್ಯರಾದ ಪಿ.ಕೆ.ಜೀವನ್, ಬಿ.ಎಸ್.ನವೀನಾ, ಜಿಲ್ಲಾ ಸಂಘದ ಉಪಾಧ್ಯಕ್ಷೆ ದೇವಕ್ಕಿ ಜಿ.ಆರ್.ನಾಯ್ಕ, ಕಟ್ಟಡ ಸಮಿತಿ ಅಧ್ಯಕ್ಷ ಗುರುವಪ್ಪ, ಸದಸ್ಯ ಎಂ.ಕೆ.ಬಾಬು, ಕಾರ್ಯದರ್ಶಿ ಎಂ.ಎಸ್.ಯೋಗೇAದ್ರ, ಸ್ಥಾಪಕ ಅಧ್ಯಕ್ಷ ವಾಮನ್ ನಾಯ್ಕ, ಮಡಿಕೇರಿ ತಾಲೂಕು ಸಂಘಟನಾ ಕಾರ್ಯದರ್ಶಿ ಎಂ.ಟಿ.ದೇವಪ್ಪ, ಮಹಿಳಾ ವೇದಿಕೆ ಅಧ್ಯಕ್ಷೆ ರತ್ಮಮಂಜರಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

೨ ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಪುರುಷರಿಗೆ ೬ ಓವರಿನ ಕ್ರಿಕೆಟ್ ಪಂದ್ಯಾಟ, ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆ ಯರಿಗೆ ಥ್ರೋಬಾಲ್, ಹಗ್ಗಜಗ್ಗಾಟ, ಸೇರಿದಂತೆ ನಿಂಬೆ ಚಮಚ ಓಟ, ವಿವಿಧ ವಿಭಾಗದಲ್ಲಿ ಓಟದ ಸ್ಪರ್ಧೆ, ಕಾಳು ಹೆಕ್ಕುವ ಸ್ಪರ್ಧೆ, ಗೋಣಿಚೀಲ ಜಿಗಿತ, ಸಂಗೀತ ಕುರ್ಚಿ, ಭಾರದ ಗುಂಡು ಎಸೆತ ಇತ್ಯಾದಿ ಕ್ರೀಡಾಕೂಟ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕ್ರಿಕೆಟ್ ಪಂದ್ಯಾಟಕ್ಕೆ ಆಗಮಿಸುವ ತಂಡದ ಆಟಗಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ ಮತ್ತು ಜಾತಿ ದೃಢೀಕರಣ ಪತ್ರವನ್ನು ಕ್ರೀಡಾಕೂಟದ ದಿನದಂದು ಕ್ರೀಡಾ ಸಮಿತಿಗೆ ನೀಡಬೇಕು. ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ೭೦೯೦೩೨೭೬೮೪, ೯೯೪೮೦೭೩೦೫೩೮, ೯೪೪೯೮೫೫೩೪೫ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.