ಮುಳ್ಳೂರು, ಡಿ. ೧೯ : ‘ರಕ್ತದಾನ ಮಾಡುವುದರಿಂದ ವ್ಯಕ್ತಿಯ ಆರೋಗ್ಯ ವೃದ್ದಿಸುವ ಜೊತೆಯಲ್ಲಿ ಮತ್ತೊಬ್ಬರ ಜೀವ ಉಳಿಸಬಹುದು. ಇದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂದು ಆಲೂರುಸಿದ್ದಾಪುರ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸುಪರ್ಣ ಕೃಷ್ಣಾನಂದ್ ಹೇಳಿದರು. ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶನಿವಾರಸಂತೆ ರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಸಮಿಪದ ನಿಡ್ತ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ÷ಮಾತನಾಡಿದರು. ಪ್ರತಿಯೊಬ್ಬರೂ ರಕ್ತದಾನ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು. ರಕ್ತದಾನ ಮಾಡುವುದರಿಂದ ವ್ಯಕ್ತಿಯ ಆರೋಗ್ಯವು ಸುಧಾರಣೆಯಾಗುತ್ತದೆ, ತುರ್ತು ಸಂದರ್ಭದಲ್ಲಿ ದಾನಿಗಳು ನೀಡುವ ರಕ್ತವನ್ನು ಅವಶ್ಯ ಇರುವ ರೋಗಿಗೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ರೀತಿ ಇತರೆ ಸಂಘ-ಸAಸ್ಥೆಗಳು ಹೆಚ್ಚಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಮತ್ತೊಬ್ಬರ ಜೀವ ಉಳಿಸುವ ಕೆಲಸ ಮಾಡುವಂತೆ ಮನವಿ ಮಾಡಿದರು.

ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಮಾತನಾಡಿ, ರಕ್ತದಾನಿಗಳು ನೀಡುವ ರಕ್ತವನ್ನು ಜಿಲ್ಲಾ ರಕ್ತನಿಧಿ ಕೇಂದ್ರದಲ್ಲಿ ಸಂಗ್ರಹ ಮಾಡಲಾಗುತ್ತದೆ. ದಾನಿಗಳಿಂದ ಸಂಗ್ರಹಿಸಿದ ರಕ್ತವನ್ನು ಪರೀಕ್ಷಿಸಿದ ನಂತರ ರಕ್ತ ನಿಧಿ ಕೇಂದ್ರದಲ್ಲಿ ಸಂಗ್ರಹ ಮಾಡಲಾಗುತ್ತದೆ, ಆಸ್ಪತ್ರೆಗಳಲ್ಲಿ ಅಪಘಾತ, ಹೆರಿಗೆ ಸಂದರ್ಭ ಹಾಗೂ ರಕ್ತಹೀನತೆ ಸಂಬAಧ ರೋಗಿಗಳಿಗೆ ರಕ್ತ ನಿಧಿ ಕೇಂದ್ರದಲ್ಲಿ ಸಂಗ್ರಹವಾಗಿರುವ ರಕ್ತವನ್ನು ನೀಡಲಾಗುತ್ತದೆ ಎಂದರು. ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೆ ದುಷ್ಪರಿಣಾಮವಾಗುವುದಿಲ್ಲ ಈ ನಿಟ್ಟಿನಲ್ಲಿ ಸಂಘ-ಸAಸ್ಥೆಗಳು ಹಮ್ಮಿಕೊಳ್ಳವ ರಕ್ತದಾನ ಶಿಬಿರದಲ್ಲಿ ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತನಿಧಿ ಕೇಂದ್ರದಲ್ಲಿ ರಕ್ತದ ಕೊರತೆಯಾಗದಂತೆ ಸಹಕರಿಸುವಂತೆ ಮನವಿ ಮಾಡಿದರು.

ರೋಟರಿ ಕ್ಲಬ್ ವಲಯ ಕಾರ್ಯದರ್ಶಿ ಎಚ್.ಎಸ್.ವಸಂತ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಎಚ್.ಪಿ.ಮೋಹನ್, ಕಾರ್ಯದರ್ಶಿ ಎಂ.ಎಸ್.ವಸAತ್, ಮಹಿಳಾ ರೋಟರಿ ಸದಸ್ಯೆ ಶ್ವೇತ ವಸಂತ್, ನಿಡ್ತ ಗ್ರಾ.ಪಂ.ಅಧ್ಯಕ್ಷೆ ಯಶೋಧ, ಪಿಡಿಒ ನಂದೀಶ್, ಆಲೂರುಸಿದ್ದಾಪುರ ಆರೋಗ್ಯ ಕೇಂದ್ರದ ಪರಿವೀಕ್ಷಕ ಪ್ರವೀಣ್‌ಕುಮಾರ್, ರೋಟರಿ ಕ್ಲಬ್ ಸದಸ್ಯರು, ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.