ಮಡಿಕೇರಿ, ಡಿ.೨೦: ಕೊಡಗು ಜಿಲ್ಲೆಯ ಹಾಡಿ/ ಕಾಲೋನಿಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶವಿದ್ದು, ಅರ್ಹರು ಅರ್ಜಿ ಸಲ್ಲಿಸಬಹು ದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಜಿಲ್ಲೆಯ ಹಾಡಿಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ವಾಸವಾಗಿರುವ ಪಡಿತರ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಕನಿಷ್ಟ ೧೦೦ ಪಡಿತರ ಚೀಟಿಗಳಿಗೆ ಸೀಮಿತ ಗೊಳಿಸಿ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಸರ್ಕಾರ ಆದೇಶಿಸಿದೆ. ಆ ದಿಸೆಯಲ್ಲಿ ವೀರಾಜಪೇಟೆ ಮತ್ತು ಸೋಮವಾರ ಪೇಟೆ ತಾಲೂಕಿನ ಒಟ್ಟು ೭ ಹಾಡಿಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶವಿದ್ದು, ಅರ್ಹರು ಅರ್ಜಿ ಸಲ್ಲಿಸಬಹು ದಾಗಿದೆ ಎಂದು ತಿಳಿಸಿದ್ದಾರೆ.
ವೀರಾಜಪೇಟೆ ತಾಲೂಕಿನ ದೇವರಪುರ ಗ್ರಾ.ಪಂ.ವ್ಯಾಪ್ತಿಯ ದೇವರಪುರ ಕಾಡು ಪೈಸಾರಿ, ನಾಲ್ಕೇರಿ ಗ್ರಾ.ಪಂ.ಯ ಬೊಮ್ಮಾಡು ಸಂಪಿಗೆಹಾಡಿ, ಸಿದ್ದಾಪುರ ಗ್ರಾ.ಪಂ.ವ್ಯಾಪ್ತಿಯ ಅವರೆಗುಂದ, ಸೋಮವಾರಪೇಟೆ ತಾಲೂಕಿನ ಗುಡ್ಡೆಹೊಸೂರು ಗ್ರಾ.ಪಂ.ವ್ಯಾಪ್ತಿಯ ಬಸವನಹಳ್ಳಿ, ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಬ್ಯಾಡಗೊಟ್ಟ, ಚೌಡ್ಲು ಗ್ರಾ.ಪಂ. ವ್ಯಾಪ್ತಿಯ ಅಯ್ಯಪ್ಪ ಕಾಲೋನಿ, ನೇರುಗಳಲೆ ಗ್ರಾ.ಪಂ. ವ್ಯಾಪ್ತಿಯ ತಣ್ಣೀರು ಹಳ್ಳ ಈ ಹಾಡಿಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶವಿದೆ ಎಂದು ತಿಳಿಸಿದ್ದಾರೆ.
ಅಗತ್ಯ ದಾಖಲೆಗಳೊಂದಿಗೆ ನಿಗದಿತ (ಫಾರಂ-೨) ನಮೂನೆ ಯಲ್ಲಿ ಭರ್ತಿ ಮಾಡಿದ ಅರ್ಜಿ ಗಳನ್ನು ಸಂಬAಧಿಸಿದ ತಹಶೀಲ್ದಾ ರರ ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿಗೆ ಕೂಡಲೇ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.