ಸೋಮವಾರಪೇಟೆ,ಡಿ.೨೦: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಎಂಇಎಸ್ ಅನ್ನು ಕೂಡಲೇ ನಿಷೇಧಿಸುವಂತೆ ಆಗ್ರಹಿಸಿ ನಗರ ಕಾಂಗ್ರೆಸ್ ವತಿಯಿಂದ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರು ನಿರಂತರ ಧಾಳಿ ಮಾಡುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬೆಳಗಾವಿಯನ್ನು ಮಹಾರಾಷ್ಟçಕ್ಕೆ ಸೇರಿಸುವ ಹುನ್ನಾರ ನಡೆಯುತ್ತಿದೆ. ಕೂಡಲೇ ಸರ್ಕಾರ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ತರದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ತಾಲೂಕು ಸೇವಾದಳದ ಅಧ್ಯಕ್ಷ ಬಿ. ಬಸವರಾಜು, ತಾಲೂಕು ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಎಚ್.ಪಿ. ರಾಜಪ್ಪ, ನಗರ ಘಟಕದ ಅಧ್ಯಕ್ಷ ನಂಜುAಡ, ನಗರ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ರಫಿ, ಉಪಾಧ್ಯಕ್ಷ ಜಮೀರ್ ಮತ್ತಿತರರು ಇದ್ದರು.