ಕೂಡಿಗೆ, ಡಿ. ೨೦: ಎನ್.ಬಿ.ಎಚ್.ಎಂ. ಮತ್ತು ಹನಿಡೇ ಬಿ ಫಾರ್ಮ್ಸೆ ಪೈವೇಟ್ ಲಿಮಿಟೆಡ್ ಬೆಂಗಳೂರು ಮತ್ತು ಹಾಸನ ಹಾಲು ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ನಡೆದ ಜೇನು ಕೃಷಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಮತ್ತು ತರಬೇತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಕೂಡಿಗೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.
ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘದ ೨೫ ಸದಸ್ಯರಿಗೆ ವಿಶೇಷ ತರಬೇತಿಯನ್ನು ನೀಡಿ ಪ್ರಮಾಣ ಪತ್ರವನ್ನು ನೀಡಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ವಹಿಸಿ ಪ್ರಮಾಣ ಪತ್ರವನ್ನು ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು, ರಾಷ್ಟಿçÃಕೃತ ಬ್ಯಾಂಕ್‌ಗಳಲ್ಲಿ ತರಬೇತಿ ಪಡೆದ ರೈತರಿಗೆ ಸಾಲ ಸೌಲಭ್ಯಗಳನ್ನು ಪಡೆದು ಸ್ವ- ಉದ್ಯೋಗಿಗಳಾಗಿ ಬದುಕು ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು. ಮುಖ್ಯ ಅತಿಥಿಯಾಗಿ ಕೂಡಿಗೆ ಡೈರಿ ವ್ಯವಸ್ಥಾಪಕ ನಂದೀಶ್, ಹಾಸನ ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಎಂ. ವೇಣುಗೋಪಾಲ್, ಸಂಪನ್ಮೂಲ ವ್ಯಕ್ತಿಗಳಾದ ಅಪೂರ್ವ, ಗುರುಪ್ರಸಾದ್ ಕಾರ್ಯಕ್ರಮ ಸಂಯೋಜಕಿ ರಜಿನಿ ತ್ರಿಪಾಟಿ, ವಿಸ್ತರಣಾಧಿಕಾರಿ ಬಿ.ವಿ. ವೀಣಾ, ತರಬೇತಿ ಕೇಂದ್ರದ ಅಧಿಕಾರಿ ಹರೀಶ್ ಸೇರಿದಂತೆ ತರಬೇತಿ ಪಡೆದ ರೈತರು ಹಾಜರಿದ್ದರು. ವೇಣುಗೋಪಾಲ ನಿರೂಪಿಸಿ, ವೀಣಾ ಸ್ವಾಗತಿಸಿ, ವಂದಿಸಿದರು.