ಕುಶಾಲನಗರ, ಡಿ. ೨೦: ಮಡಿಕೇರಿ- ಕುಶಾಲನಗರ ರಾಷ್ಟಿçÃಯ ಹೆದ್ದಾರಿ ನಡುವೆ ಹೊಸಕೋಟೆ, ಗುಡ್ಡೆಹೊಸೂರು ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ಹಾವಳಿಯನ್ನು ಶಾಶ್ವತವಾಗಿ ತಪ್ಪಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸತೀಶ್, ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಾದಾಪಟ್ಟಣ ಗ್ರಾಮದಲ್ಲಿ ನಡೆದ ಗ್ರಾಮಸಭೆಯಲ್ಲಿ ಸಾರ್ವಜನಿಕರಿಂದ ಈ ಬಗ್ಗೆ ಅಹವಾಲು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ರಸ್ತೆಯಲ್ಲಿ ಕಂಡುಬರುವ ಜಾನುವಾರುಗಳ ಮಾಲೀಕರು ತಕ್ಷಣ ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪಂಚಾಯಿತಿ ಮೂಲಕ ಬೀಡಾಡಿ ಜಾನುವಾರುಗಳನ್ನು ಮೈಸೂರಿನ ಪಿಂಜರ್ಪೋಲ್ಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.