ನಾಪೋಕ್ಲು, ಡಿ. ೨೦: ಸಮೀಪದ ಹೊದ್ದೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೧೪ ವರ್ಷ ಸೇವೆ ಸಲ್ಲಿಸಿ ವೀರಾಜಪೇಟೆ ತಾಲೂಕಿನ ಹೆಮ್ಮಾಡು ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಎಂ.ಎಸ್.ವಾಣಿ ಅವರನ್ನು ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ದೇವಪ್ಪ ಹಾಗೂ ಮುಖ್ಯ ಶಿಕ್ಷಕಿ ಪಾರ್ವತಿ ಮಾತನಾಡಿದರು. ಎಸ್ಡಿಎಂಸಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಸುಮಿತ್ರಾ ನಿರೂಪಿಸಿ ವಂದಿಸಿದರು.