ಕುಶಾಲನಗರ, ಡಿ. ೨೦: ಇಲ್ಲಿನ ನಾಡ ಪ್ರಭು ಪತ್ತಿನ ಸಹಕಾರ ಸಂಘ ೨೦೨೦ -೨೧ ನೇ ಸಾಲಿನಲ್ಲಿ ೫.೫ ಲಕ್ಷ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಎಂ. ಕೆ. ದಿನೇಶ್ ತಿಳಿಸಿದ್ದಾರೆ. ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಸಾಲಿನಲ್ಲಿ ಒಟ್ಟು ರೂ. ೪.೩೯ ಕೋಟಿ ನಡೆಸಿದ್ದು ಸದಸ್ಯರುಗಳಿಗೆ ಅನುಕೂಲಕ್ಕೆ ತಕ್ಕಂತೆ ಅವಶ್ಯವಿರುವ ಜಾಮೀನು ಸಾಲ, ಪಿಗ್ಮಿ ಸಾಮಾನ್ಯ ಸಾಲ, ಆಭರಣ ಸಾಲ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಸಂಘದ ವಾರ್ಷಿಕ ಮಹಾಸಭೆ ತಾ. ೨೧ರಂದು ಕುಶಾಲನಗರದ ಗೌಡ ಸಮಾಜ ರಸ್ತೆಯ ಎಪಿಸಿಎಂಎಸ್ ಸಭಾಂಗಣದಲ್ಲಿ ಬೆಳಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.