ಕುಶಾಲನಗರ, ಡಿ.೨೦: ಬೆಳಗಾಂನಲ್ಲಿ ಗಲಭೆ, ಗೊಂದಲ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಎಂ.ಇ.ಎಸ್ ಕಾರ್ಯಕರ್ತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಮತ್ತು ಎಂಇಎಸ್ ಸಂಘಟನೆಯನ್ನು ಕೂಡಲೇ ನಿಷೇಧಿಸಬೇಕು ಎಂದು ಕುಶಾಲನಗರದಲ್ಲಿ ಕರ್ನಾಟಕ ಕಾವಲು ಪಡೆ ಕಾರ್ಯಕರ್ತರಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ. ಕೃಷ್ಣ ನೇತೃತ್ವದಲ್ಲಿ ಕಾರ್ಯಕರ್ತರು ಕುಶಾಲನಗರ ತಾಲೂಕು ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿದರು.