ಚೆಟ್ಟಳ್ಳಿ, ಡಿ. ೨೧: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ತಾ. ೨೭ ರಿಂದ ೩೧ರ ವರೆಗೆ ದಕ್ಷಿಣ ಭಾರತದ ವಿಶ್ವವಿದ್ಯಾಲಯಗಳ ನಡುವಿನ ಮಹಿಳೆಯರ ಹಾಕಿ ಪಂದ್ಯಾವಳಿಯು ಪೊನ್ನಂಪೇಟೆ ಹಾಕಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಭಾರತದ ಅಂತರ ವಿಶ್ವವಿದ್ಯಾನಿಲಯಗಳ ನಡುವಿನ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು ೩೫ ವಿಶ್ವವಿದ್ಯಾನಿಲಯಗಳು ಪಾಲ್ಗೊಳ್ಳಲಿವೆ. ಕೋವಿಡ್ ನಿಯಮಗಳನ್ನು ಪಾಲಿಸಿ ಪಂದ್ಯಾವಳಿಯು ನಡೆಯಲಿದೆ ಎಂದು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ನಿರ್ದೇಶಕರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಹಿಳಾ ಹಾಕಿ ತಂಡದ ವ್ಯವಸ್ಥಾಪಕರಾದ ಕಂಬೀರAಡ ರಾಕಿ ಪೂವಣ್ಣ ಮಾಹಿತಿ ನೀಡಿದ್ದಾರೆ.
ತಾ. ೨೭ ರಂದು ಹಾಕಿ ಪಂದ್ಯಾವಳಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟಾçರ್ ಡಾ. ಕಿಶೋರ್ ಕುಮಾರ್ ಸಿ.ಕೆ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಹಾಗೂ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ.ಜಿ ಬೋಪಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಾಕಿ ಕೂರ್ಗ್ ಅಧ್ಯಕ್ಷ ಪೈಕೇರ ಕಾಳಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ ಸುಜಾಕುಶಾಲಪ್ಪ, ಅಂರ್ರಾಷ್ಟಿçÃಯ ಬಾಸ್ಕೆಟ್ ಬಾಲ್ ಆಟಗಾರ್ತಿ ಡಾ. ಪುಷ್ಪ ಕುಟ್ಟಣ್ಣ, ಒಲಂಪಿಯನ್ ಹಾಕಿ ಆಟಗಾರ ಬಿ.ಕೆ. ಸುಬ್ರಮಣಿ, ಕಾವೇರಿ ಕಾಲೇಜು ಪ್ರಾಂಶುಪಾಲ ಪ್ರೊಫೆಸರ್ ಕಾವೇರಪ್ಪ ಎಂ.ಬಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಹಾಗೂ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.