ಬೆಳಗಾವಿ, ಡಿ. ೨೧ : ಈ ಬಾರಿಯ ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್ ಸಂಬAಧ ಮಂಗಳವಾರ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹಿರಂಗ ಕಾರ್ಯಕ್ರಮಕ್ಕೆ ನಿಷೇಧ ಹೇರಿದೆ.

ಕ್ರಿಸ್‌ಮಸ್ ಆಚರಣೆ ಸಂಬAಧ ಚರ್ಚ್ ಆವರಣದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ ವೇಳೆ ಕೋವಿಡ್ ನಿಯಮ ಕಡ್ಡಾಯ ಪಾಲಿಸಬೇಕು.

ಆಚರಣೆಗಳು ಅಥವಾ ಪ್ರಾರ್ಥನೆಗಳನ್ನು ನಡೆಸಲು ಯಾವುದೇ ಸಾರ್ವಜನಿಕ ಸ್ಥಳಗಳು, ರಸ್ತೆಗಳು, ಉದ್ಯಾನವನ ಇತ್ಯಾದಿಗಳನ್ನು ಬಳಸುವಂತಿಲ್ಲ. ಹೊಸ ವರ್ಷಾಚರಣೆ ವೇಳೆ ಕ್ಲಬ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳು, ಹೊಟೇಲ್‌ಗಳು, ಉದ್ಯಾನವನಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟಾç, ಸಮೂಹ ನೃತ್ಯ ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿಲ್ಲ.

ಹೊಸ ವರ್ಷವನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು, ಉದ್ಯಾನವನಗಳು, ಆಟದ ಮೈದಾನಗಳು ಇತ್ಯಾದಿಗಳನ್ನು ಬಳಸಬಾರದು.

ರೆಸ್ಟೋರೆಂಟ್‌ಗಳು, ಹೊಟೇಲ್‌ಗಳು, ಕ್ಲಬ್‌ಗಳು, ಪಬ್‌ಗಳು ಎಂದಿನAತೆ ಕೋವಿಡ್ ನಿಯಮ ಪಾಲನೆಯೊಂದಿಗೆ ಸಿಬ್ಬಂದಿಗಳು ಆರ್‌ಟಿಪಿಸಿಆರ್ ನೆಗೆಟಿವ್ ಮತ್ತು ೨ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆಯುವ ಮೂಲಕ ಕಾರ್ಯನಿರ್ವಹಿಸಬೇಕು.

(ಮೊದಲ ಪುಟದಿಂದ) ರೆಸ್ಟೋರೆಂಟ್‌ಗಳು, ಹೊಟೇಲ್‌ಗಳು, ಕ್ಲಬ್‌ಗಳು, ಪಬ್‌ಗಳಿಗೆ ಪ್ರವೇಶಿಸುವ ಸಾರ್ವಜನಿಕರು ಕಡ್ಡಾಯವಾಗಿ ೨ ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರಬೇಕು.

ಅಪಾರ್ಟ್ಮೆಂಟ್ ಅಸೋಸಿಯೇಷನ್‌ಗೆ ಸಂಬAಧಪಟ್ಟAತೆ ಸಾಮಾಜಿಕ ಅಂತರ ಹಾಗೂ ಕೋವಿಡ್ ನಿಯಮ ಪಾಲನೆಯೊಂದಿಗೆ ತಮ್ಮ ಆವರಣದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿಸಲಾಗಿದೆ. ಆದರೆ ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಫ್ಲೋರ್‌ನಂತಹ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಚರಿಸುವಂತಿಲ್ಲ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೊಟೇಲ್‌ಗಳು, ಮಾಲ್‌ಗಳು, ಪಬ್, ರೆಸ್ಟೋರೆಂಟ್‌ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕಿçÃನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.