ಮಡಿಕೇರಿ, ಡಿ. ೨೧: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ೨೦೧೯-೨೦ ಮತ್ತು ೨೦೨೦-೨೧ನೇ ಸಾಲಿನ ಗೌರವ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಆರು ಮಂದಿ ಸಾಧಕರು ಈ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ ತಿಳಿಸಿದ್ದಾರೆ.

ಪತ್ರಿಕಾ ಭವನದಲ್ಲಿ ಕರೆಯ ಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು. ಕಳೆದ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಸಲು ಸಾಧ್ಯವಾಗದ ಕಾರಣ ಕಳೆದ ಹಾಗೂ ಈ ಬಾರಿಯ ಎರಡು ಸಾಲಿನ ಪ್ರಶಸ್ತಿಗಳನ್ನು ಜ. ೩ ರಂದು ಮಧ್ಯಾಹ್ನ ೩ ಗಂಟೆಗೆ ಸುಳ್ಯದ ಅಮರಶ್ರೀ ಬಾಗ್‌ನ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಗುತ್ತದೆ ಎಂದರು.

೨೦೧೯-೨೦ನೇ ಸಾಲಿನಲ್ಲಿ ಗೌರವ ಪ್ರಶಸ್ತಿಗೆ ಅರೆಭಾಷೆ ಸಾಹಿತ್ಯ ಕ್ಷೇತ್ರದಿಂದ ಎನ್.ಎಸ್. ದೇವಿಪ್ರಸಾದ್, ಅರೆಭಾಷೆ ಜಾನಪದ ಕ್ಷೇತ್ರದಿಂದ ಪಂಜಿಪಳ್ಳ ಇಂದ್ರಾಕ್ಷಿ ವೆಂಕಪ್ಪ, ಚಿತ್ರಕಲೆ

ಕ್ಷೇತ್ರದಿಂದ ದಿ. ಮೋಹನ್‌ಸೋನಾ, ೨೦೨೦-೨೧ನೇ ಸಾಲಿನಲ್ಲಿ ಅರೆಭಾಷೆ ಸಾಹಿತ್ಯ ಕ್ಷೇತ್ರದಲ್ಲಿ ಕುಂಞÂÃಟಿ ಶಿವರಾಮಗೌಡ,

(ಮೊದಲ ಪುಟದಿಂದ) ಸಂಶೋಧನಾ ಕ್ಷೇತ್ರದಲ್ಲಿ ಡಾ. ಕೋರನ ಸರಸ್ವತಿ ಪ್ರಕಾಶ್, ಪಾರಂಪರಿಕ ವೈದ್ಯಕ್ಷೇತ್ರದಲ್ಲಿ ಪದ್ಮಯ್ಯಗೌಡ, ಎನ್. ಪರಿವಾರಕನ ಇವರುಗಳು ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಈ ಗೌರವ ಪ್ರಶಸ್ತಿಯು ರೂ. ೫೦ ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಲಕ್ಷಿö್ಮನಾರಾಯಣ ಕಜೆಗದ್ದೆ ತಿಳಿಸಿದರು.

ಜ. ೩ ರಂದು ನಡೆಯುವ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಚಿವ ಎಸ್. ಅಂಗಾರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಲೋಕಸಭಾ ಸದಸ್ಯ ನಳಿನ್‌ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಪಾಲ್ಗೊಳ್ಳಲಿದ್ದು, ತನ್ನ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ. ಪ್ರಶಸ್ತಿ ಪುರಸ್ಕೃತರ ಬಗ್ಗೆ ಮೈಸೂರಿನ ಉಪನ್ಯಾಸಕ ಪಟ್ಟಡ ಶಿವಕುಮಾರ್ ಮಾತನಾಡಲಿದ್ದು, ಕೆ.ಆರ್. ಗೋಪಾಲಕೃಷ್ಣ, ರಮ್ಯ ದಿಲೀಪ್ ಬಾಬ್ಲುಬೆಟ್ಟು, ಮಯೂರ್ ಅಂಬೆಕಲ್ಲು ಅರೆಭಾಷೆ ಹಾಡುಗಳನ್ನು ಹಾಡಲಿದ್ದಾರೆ ಎಂದು ಲಕ್ಷಿö್ಮನಾರಾಯಣ ಕಜೆಗದ್ದೆ ಮಾಹಿತಿಯಿತ್ತರು.

ಗೋಷ್ಠಿಯಲ್ಲಿ ಅಕಾಡೆಮಿಯ ಸದಸ್ಯರಾದ ಡಾ.ಕೆ.ಸಿ. ದಯಾನಂದ, ಚೊಕ್ಕಾಡಿ ಪ್ರೇಮಾ ರಾಘವಯ್ಯ, ಬೈತಡ್ಕ ಜಾನಕಿ ಉಪಸ್ಥಿತರಿದ್ದರು.