ಮಡಿಕೇರಿ, ಡಿ. ೨೧: ಕೊಡಗು ಜಿಲ್ಲೆಯಲ್ಲಿ ಹಲವಾರು ಕಲ್ಲುಗಣಿಗಾರಿಕೆ ಮತ್ತು ಕ್ರಷರ್‌ಗಳು ನಿಯಾಮಾನುಸಾರವಾಗಿ ಸೂಕ್ತ ಪ್ರಾಧಿಕಾರದಿಂದ ಅನುಮತಿ ಪಡೆದು ಕ್ರಮಬದ್ಧವಾಗಿ ಕಾರ್ಯನಿರ್ವಹಿಸುತ್ತಿವೆ. ಹೀಗಿದ್ದರೂ ಕೊಡಗು ಜಿಲ್ಲಾ ಲಾರಿ ಮಾಲೀಕರ ಮತ್ತು ಚಾಲಕರ ಸಂಘವು ಕ್ರಷರ್‌ಗಳಿಂದ ಸೂಕ್ತ ಪರ್ಮಿಟ್‌ಗಳನ್ನು ನೀಡುತ್ತಿಲ್ಲ ಮತ್ತು ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಲೈಸೆನ್ಸ್ ಹೊಂದಿರುವ ಕಲ್ಲುಗಣಿಗಳು ಮತ್ತು ಕ್ರಷರ್ ಘಟಕಗಳಿಂದ ನಿಯಮಾನುಸಾರವಾಗಿ ಪರ್ಮಿಟ್‌ನ್ನು ನೀಡುತ್ತಿದ್ದೇವೆ ಮತ್ತು ಎಲ್ಲಾ ಕ್ರಷರ್‌ಗಳಲ್ಲಿಯೂ ಗುಣಮಟ್ಟದ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿದ್ದೇವೆ ಎಂದು ಕೊಡಗು ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ವಿ.ಎಂ. ವಿಜಯ ಹಾಗೂ ಕಾರ್ಯದರ್ಶಿ ರಮೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.