ಕುಶಾಲನಗರ, ಡಿ.೨೧ : ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನಾಶ ಮಾಡಿದ ಹಿನ್ನೆಲೆಯಲ್ಲಿ ಕುಶಾಲನಗರ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಮಿತಿಯ ಅಧ್ಯಕ್ಷÀ ಬಿ .ಆರ್ ಪ್ರಭಾಕರ್ ನೇತೃತ್ವದಲ್ಲಿ ಕುಶಾಲನಗರ ಪಟ್ಟಣದಲ್ಲಿ ಕಾರ್ಯಕರ್ತರು ಎಂಇಎಸ್ ವಿರುದ್ಧ ಘೋಷಣೆ ಕೂಗಿ ತಕ್ಷಣ ಅವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಒತ್ತಾಯಿಸಿ ನಂತರ ತಾಲೂಕು ಕಚೇರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭ ಸಮಿತಿಯ ಪ್ರಮುಖರಾದ ಮಂಜುನಾಥ್, ಗಣೇಶ್, ಪ್ರಸನ್ನ, ಕುಮಾರ್, ಭಾಗ್ಯ ಮತ್ತಿತರರು ಇದ್ದರು.