ಮತಾಂತರ ನಿಷೇಧ ಮಸೂದೆ ಮಂಡನೆಗೆ ಸಚಿವ ಸಂಪುಟ ಅಸ್ತು
ಬೆಳಗಾವಿ, ಡಿ. ೨೦: ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಸೋಮವಾರ ನಡೆದ ಸಚಿವ ಸಂಪುಟ ಸಭೆ ಮತಾಂತರ ನಿಷೇಧ ಮಸೂದೆ ಮಂಡನೆಗೆ ಒಪ್ಪಿಗೆ ನೀಡಿದೆ. ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖವಾಗಿ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲು ಒಪ್ಪಿಗೆ ನೀಡಲಾಗಿದೆ. ಮತಾಂತರ ನಿಷೇಧ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಅದನ್ನು ನಾಳೆ ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ. ಈ ವಿಧೇಯಕ ಮಂಡನೆಗೆ ಪ್ರತಿ ಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಬಿಜೆಪಿ ಮಾತ್ರ ಶತಾಯ ಗತಾಯ ಈ ವಿಧೇಯಕ ಮಂಡನೆಗೆ ಮುಂದಾಗಿದೆ.
ಎAಇಎಸ್ ಸಂಘಟನೆ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ!
ಬೆಳಗಾವಿ, ಡಿ. ೨೦: ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ ಹಾಗೂ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ನಡೆಸಿದ್ದ ಎಂಇಎಸ್ ಸಂಘಟನೆಯ ವಿರುದ್ಧ ಅಧಿವೇಶನದಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ ಅವರು ಖಂಡನಾ ನಿರ್ಣಯವನ್ನು ಮಂಡಿಸಿದ್ದು ಎಲ್ಲರೂ ಒಕ್ಕೊರಳಿನಿಂದ ಅಂಗೀಕರಿಸಿದ್ದಾರೆ. ನಂತರ ಮಾತನಾಡಿದ ಅವರು ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ ಗಡಿಯಾಚೆಗೂ ಪುಂಡಾಟಿಕೆಗೆ ಪ್ರೋತ್ಸಾಹ ಸಿಗುತ್ತಿದೆ. ಅದನ್ನು ನಿಲ್ಲಿಸಬೇಕೆಂದು ಸದನ ನಿರ್ಣಯ ಮಾಡುತ್ತದೆ. ಇನ್ನು ಮುಂದೆ ಇಂತಹ ಪ್ರಕರಣಗಳನ್ನು ದೇಶದ್ರೋಹ ಎಂದು ಪರಿಗಣಿಸಿ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ. ಸದನದ ಎಲ್ಲ ಪಕ್ಷಗಳೂ ಈ ವಿಚಾರದಲ್ಲಿ ಸರ್ಕಾರದ ಜೊತೆಗೆ ಇವೆ ಎಂದು ನಿರ್ಣಯ ಮಂಡಿಸಿದರು. ಮಹಾರಾಷ್ಟç ಏಕೀಕರಣ ಸಮಿತಿ (ಎಂಇಎಸ್) ನಿಷೇಧದ ಬಗ್ಗೆ ಹಲವರು ಸಲಹೆ ಮಾಡಿದ್ದಾರೆ. ಈ ಬಗ್ಗೆ ಕಾನೂನಾತ್ಮಕವಾಗಿ ಚಿಂತನೆ ನಡೆಸುತ್ತೇವೆ. ನಿಷೇಧಿಸಲು ಆಗದಿದ್ದರೂ ನಿಯಂತ್ರಣಕ್ಕೆ ಕ್ರಮಕೈಗೊಳ್ಳುತ್ತೇವೆ. ಗಡಿಭಾಗವನ್ನು ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತದೆ ಎಂದು ತಿಳಿಸಿದರು. ಅಲ್ಲದೆ ಬೆಳಗಾವಿಯ ಸುವರ್ಣಸೌಧ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆ ಸ್ಥಾಪಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಒಂದೇ ಕುಟುಂಬದ ಐವರು ಶವವಾಗಿ ಪತ್ತೆ
ಹಿಸಾರ್, ಡಿ. ೨೦: ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸೋಮವಾರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಿಸಾರ್?? ಜಿಲ್ಲೆಯ ಆಗ್ರೋಹ ಪೊಲೀಸ್ ಠಾಣೆ ವ್ಯಾಪ್ತಿಯ ನಂಗ್ತಾಲಾ ಗ್ರಾಮದ ಕುಟುಂಬಸ್ಥರು ಶವವಾಗಿ ಪತ್ತೆಯಾಗಿದ್ಧಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಕುಟುಂಬದ ಮುಖ್ಯಸ್ಥ ತನ್ನ ಹೆಂಡತಿ ಮತ್ತು ಮಕ್ಕಳನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರಮೇಶ್ ಕುಮಾರ್ (೪೩) ಅವರ ಮೃತದೇಹ ಮನೆಯ ಹೊರಗೆ ರಸ್ತೆಯಲ್ಲಿ ಬಿದ್ದಿದ್ದು, ಅವರ ಪತ್ನಿ ಸವಿತಾ (೩೫), ಇಬ್ಬರು ಪುತ್ರಿಯರಾದ ಅನುಷ್ಕಾ (೧೪) ಮತ್ತು ದೀಪಿಕಾ (೧೨) ಹಾಗೂ ಮಗ ಕೇಶವ್ (೧೦) ಅವರ ಶವಗಳು ಮನೆಯೊಳಗೆ ಪತ್ತೆಯಾಗಿವೆ. ಸೋಮವಾರ ಬೆಳಗ್ಗೆ ರಮೇಶನ ಶವವನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಗ್ರೋಹ ವೈದ್ಯಕೀಯ ಕಾಲೇಜಿಗೆ ಕಳುಹಿಸಿದ್ದಾರೆ.
೨೦೨೧-೨೨ರಲ್ಲಿ ನೈಸರ್ಗಿಕ ವಿಪತ್ತಿನಲ್ಲಿ ೨,೦೦೦ ಜನರ ಸಾವು
ನವದೆಹಲಿ, ಡಿ. ೨೧: ೨೦೨೧-೨೨ರಲ್ಲಿ ಸಂಭವಿಸಿದ ಚಂಡಮಾರುತ, ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಸುಮಾರು ೨,೦೦೦ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಲ ಶಕ್ತಿ ಸಚಿವಾಲಯ ಮಾಹಿತಿ ಪ್ರಕಾರ, ಮಹಾರಾಷ್ಟçದಲ್ಲಿ ಅತಿ ಹೆಚ್ಚು ೪೮೯ ಜನರು ಸಾವನ್ನಪ್ಪಿದ್ದರೆ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ತಲಾ ೧೬೨ ಜನರು ಅಸುನೀಗಿದ್ದಾರೆ. ೨೦೨೧-೨೨ರಲ್ಲಿ ಚಂಡಮಾರುತ, ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಒಟ್ಟಾರೇ, ೨,೦೦೨ ಜನರು ಸಾವನ್ನಪ್ಪಿರುವುದಾಗಿ ಮಾಹಿತಿಯಲ್ಲಿ ಹೇಳಲಾಗಿದೆ. ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ನವಾಮಿ ಗಂಗಾ ಕಾರ್ಯಕ್ರಮದಡಿ ಇಲ್ಲಿಯವರೆಗೂ ೩೫೭ ಯೋಜನೆಗಳನ್ನು ೩೦,೭೮೦ ಕೋಟಿ ರೂ. ಅಂದಾಜು ವೆಚ್ಚದಲ್ಲಿ ಮಂಜೂರು ಮಾಡಲಾಗಿದೆ. ಈ ಪೈಕಿ ೧೭೮ ಯೋಜನೆಗಳು ಪೂರ್ಣಗೊಂಡಿರುವುದಾಗಿ ತಿಳಿಸಿದರು. ದಿನಕ್ಕೆ ೪,೯೫೨ ಮಿಲಿಯನ್ ಲೀಟರ್ ತ್ಯಾಜ್ಯ ಸಂಸ್ಕರಣಾ ಘಟಕ ಸಾಮರ್ಥ್ಯದ ಪುನರುಜ್ಜೀವನ ಮತ್ತು ೫,೨೧೨ ಕಿಮಿ ಒಳಚರಂಡಿ ನಿರ್ಮಾಣಕ್ಕಾಗಿ ರೂ. ೨೪,೨೪೯ ಕೋಟಿ ರೂ ವೆಚ್ಚದೊಂದಿಗೆ ೧೫೭ ಒಳಚರಂಡಿ ಮೂಲಸೌಕರ್ಯ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ, ಈ ಪೈಕಿ ೭೪ ಯೋಜನೆಗಳು ಪೂರ್ಣಗೊಂಡಿವೆ ಎಂದು ಶೇಖಾವತ್ ಲಿಖಿತ ಉತ್ತರದಲ್ಲಿ ಸದನಕ್ಕೆ ಮಾಹಿತಿ ನೀಡಿದರು.