ಮಡಿಕೇರಿ, ಡಿ. ೨೦: ಮಡಿಕೇರಿಯ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಸ್ಟೊರ‍್ಸ್ (ಜನತಾ ಬಜಾರ್)ನ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಗರದ ಬಾಲಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನಂದಿನೆರವAಡ ರವಿಬಸಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಕಾರ್ಯ ಚಟುವಟಿಕೆಗಳ ಕುರಿತಾಗಿ ಚರ್ಚೆ ನಡೆಯಿತು. ಸಂಘದ ಉಪಾಧ್ಯಕ್ಷ ಧರ್ಮಪಾಲ ಪ್ರಭು, ಆಡಳಿತ ಮಂಡಳಿ ಸದಸ್ಯರು, ವ್ಯವಸ್ಥಾಪಕಿ ಕಳ್ಳೀರ ರೂಪಾ ದೇವಯ್ಯ ಮತ್ತಿತರರು ಪಾಲ್ಗೊಂಡಿದ್ದರು.