ಮಡಿಕೇರಿ, ಡಿ. ೨೧: ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಮಡಿಕೆ ತಯಾರಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ತಾ. ೨೬ ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ ೯.೩೦ಕ್ಕೆ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಕೆ.ಇ.ಬಿ ಹಿಂಭಾಗದಲ್ಲಿರುವ ಬೆಳ್ಯಪ್ಪ ಸ್ಮಾರಕ ಭವನದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ೨೦೨೦-೨೧ನೇ ಸಾಲಿನ ೧೦ ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಅಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿರುವ ನಾಣಯ್ಯ, ಸಂಘವು ರಾಜಕೀಯ ರಹಿತವಾಗಿದ್ದು, ಸರ್ವ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.